ಘೋಷಣೆ ಕೂಗುತ್ತಾ ಪ್ರತಿಭಟನೆಗೆ ಮುಂದಾಗಿದ್ದಾಗ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆ ಪ್ರತಿಭಟನಾನಿರತರು ಮಾತಿನ ಚಕಮಕಿ ನಡೆಸಿದ್ದಾರೆ.

ಚಿಕ್ಕಮಗಳೂರು (ಜ.18): ಚಿಕ್ಕಮಗಳೂರಿನಲ್ಲಿ ಏಬಿವಿಪಿ ಕಾರ್ಯಕರ್ತ ಅಭಿಷೇಕ್ ಆತ್ಮಹತ್ಯೆ ಖಂಡಿಸಿ ಪ್ರತಿಭಟನೆಗೆ ಮುಂದಾದ ABVP ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರತಿಭಟನೆ ನಡೆಸದಂತೆ ಎಸ್​.ಪಿ. ಅಣ್ಣಾಮಲೈ ಸೂಚನೆ ನೀಡಿದ್ದರೂ ಏಬಿವಿಪಿ ಕಾರ್ಯಕರ್ತರು ಬಲವಂತವಾಗಿ ಕಾಲೇಜು ಬಂದ್’​ಗೆ ಕರೆ ನೀಡಿದ್ದರು. ಅಲ್ಲದೆ ಕಾಲೇಜಿಗೆ ತೆರಳಿ ವಿದ್ಯಾರ್ಥಿಗಳನ್ನು ತರಗತಿಯಿಂದ ಹೊರಗಡೆ ಕಳುಹಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಒತ್ತಾಯಿಸಿದ್ದರು.

ಘೋಷಣೆ ಕೂಗುತ್ತಾ ಪ್ರತಿಭಟನೆಗೆ ಮುಂದಾಗಿದ್ದಾಗ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರ ಜೊತೆ ಪ್ರತಿಭಟನಾನಿರತರು ಮಾತಿನ ಚಕಮಕಿ ನಡೆಸಿದ್ದಾರೆ.

 ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

(ಸಾಂದರ್ಭಿಕ ಚಿತ್ರ)