ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಭಂಗ ಆರೋಪದಡಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು(ಮಾ.24): ಕಳೆದ 4 ದಿನಗಳಿಂದ ಅಂಗನವಾಡಿ ಕಾರ್ಯಕರ್ತೆಯರನ್ನು ಸಂಘಟಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದ ಅಧ್ಯಕ್ಷೆ ವರಲಕ್ಷ್ಮಿ ವಿರುದ್ಧ ದೂರು ದಾಖಲಾಗಿದೆ.

ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆಗೆ ಭಂಗ ಆರೋಪದಡಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೊತೆಗೆ ಸಿಐಟಿಯೂ ಕಾರ್ಯಾಧ್ಯಕ್ಷೆ ಶಾಂತ ವಿರುದ್ಧವೂ ಎಫ್​ಐಆರ್​ ದಾಖಲಿಸಲಾಗಿದೆ.