ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಪ್ರಕರಣವೊಂದರ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹೆದರುತ್ತಿದ್ದು ಇದಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆದ​ರಿ​ಕೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. 

ಬೆಳಗಾವಿ: ನಗರದ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಿವಾನಂದ ಹೊಸಮನಿ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರು ಹಲ್ಲೆಗೆ ಮುಂದಾಗಿರುವ ಘಟ​ನೆಗೆ ಸಂಬಂಧಿಸಿದಂತೆ ಸಂಸದ ಸುರೇಶ್‌ ಅಂಗಡಿ ಅವರು ಜಿಲ್ಲಾ ಪೊಲೀಸರನ್ನು ಕಟುವಾಗಿ ಟೀಕಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಪೊಲೀಸರು ಹೆದರುತ್ತಿದ್ದು ಇದಕ್ಕೆ ಶಾಸಕ ಸತೀಶ ಜಾರಕಿಹೊಳಿ ಅವರ ಬೆದ​ರಿ​ಕೆಯೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್‌ ಹಾಗೂ ಜಿಲ್ಲಾಡಳಿತ ಸುಮ್ಮನೆ ಕುಳಿತಿರುವುದು ಸರಿಯಲ್ಲ. 

ಧೈರ್ಯದಿಂದ ಕೆಲಸ ನಿರ್ವಹಿಸಲು ಸಾಧ್ಯವಾಗದಿದ್ದರೆ ಅಂತಹ ಅಧಿ​ಕಾ​ರಿ​ಗಳು ಬೆಳಗಾವಿಯಿಂದ ಜಾಗ ಖಾಲಿ ಮಾಡಲಿ ಎಂದು ಒತ್ತಾಯಿಸಿದರು. ಪ್ರಕ​ರ​ಣಕ್ಕೆ ಸಂಬಂಧಿ​ಸಿ​ದಂತೆ ಸೂಕ್ತ ಕ್ರಮ ಕೈಗೊ​ಳ್ಳ​ದಿ​ದ್ದರೆ ಮುಂದಿನ ದಿನಗಳಲ್ಲಿ ಸಿಎಂ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಸಂಸದ ಸುರೇಶ ಅಂಗಡಿ ಎಚ್ಚರಿಕೆ ನೀಡಿದರು.