ರಕ್ಷಣೆ ನೀಡಬೇಕಾದ ಖಾಕಿ ಪಡೆಯೇ ಯುವತಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ಬೆಂಗಳೂರಿನಲ್ಲಿ ಇದೀಗ ಬೆಳಕಿಗೆ ಬಂದಿದೆ. ಯಶವಂತಪುರ ಎಸಿಪಿ ರವಿಪ್ರಸಾದ್ ಹಾಗೂ  ಸೋಲದೇವನಹಳ್ಳಿ ಇನ್ಸ್'ಪೆಕ್ಟರ್'ರಿಂದ  ಯುವತಿ ಮೇಲೆ ದೌರ್ಜನ್ಯ ನಡೆದಿದ್ದು, ಇದರಿಂದ  ಬೇಲಿಯೇ ಎದ್ದು ಹೊಲ ಮೇದಂತಾಗಿದೆ.  

ಬೆಂಗಳೂರು(ನ.27): ರಕ್ಷಣೆ ನೀಡಬೇಕಾದ ಖಾಕಿ ಪಡೆಯೇ ಯುವತಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆಯೊಂದು ಬೆಂಗಳೂರಿನಲ್ಲಿ ಇದೀಗ ಬೆಳಕಿಗೆ ಬಂದಿದೆ. ಯಶವಂತಪುರ ಎಸಿಪಿ ರವಿಪ್ರಸಾದ್ ಹಾಗೂ ಸೋಲದೇವನಹಳ್ಳಿ ಇನ್ಸ್'ಪೆಕ್ಟರ್'ರಿಂದ ಯುವತಿ ಮೇಲೆ ದೌರ್ಜನ್ಯ ನಡೆದಿದ್ದು, ಇದರಿಂದ ಬೇಲಿಯೇ ಎದ್ದು ಹೊಲ ಮೇದಂತಾಗಿದೆ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದ ಯುವತಿಯ ಬಳಿ ಪೊಲೀಸ್ ಅಧಿಕಾರಿಗಳು ಅತ್ಯಂತ ಅಮಾನವೀಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಪ್ರಕರಣ ವಿಚಾರಣೆ ನಡೆಸುತ್ತಿದ್ದ ಯಶವಂತಪುರ ಎಸಿಪಿ ರವಿಪ್ರಸಾದ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಅಸಹ್ಯವಾದ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ನೊಂದ ಯುವತಿಯು ಎಸಿಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನಿಡಿದ್ದಾರೆ.