ಹೆಲ್ಮೆಟ್ ಧರಿಸದ ಬೈಕ್ ಸವಾರರೊಬ್ಬರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾವಾಗಿ, ಬೈಕ್ ಸವಾರ ಸಾವಿಗೀಡಾದ ಘಟನೆ ಪ. ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.

ಕೋಲ್ಕತಾ: ಹೆಲ್ಮೆಟ್ ಧರಿಸದ ಬೈಕ್ ಸವಾರರೊಬ್ಬರಿಗೆ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾವಾಗಿ, ಬೈಕ್ ಸವಾರ ಸಾವಿಗೀಡಾದ ಘಟನೆ ಪ. ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಪೊಲೀಸರು ಸುರಕ್ಷಿತ ವಾಹನ ಚಾಲನೆಗೆ ಸಂಬಂಧಿಸಿ ಅಭಿಯಾನ ನಡೆಸಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆ ವೇಳೆ ಹೆಲ್ಮೆಟ್ ಧರಿಸದ ಸೌಮೇನ್ ದೇಬನಾಥ ಎಂಬವರ ಜೊತೆ ವಾಗ್ವಾದ ನಡೆದು, ಹಲ್ಲೆ ನಡೆಸಲಾಗಿದೆ. ಗಾಯಗೊಂಡ ಸೌಮೇನ್‌ರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಕೊನೆಯುಸಿರೆಳೆದಿದ್ದಾರೆ.

ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಲಾಗಿದೆ. ಘಟನೆಯ ಬಳಿಕ ಉದ್ರಿಕ್ತ ಸ್ಥಳೀಯರು ಪೊಲೀಸರನ್ನು ಬೆನ್ನಟ್ಟಿ ಗಲಭೆ ನಡೆಸಿದ್ದಾರೆ.