ವಿಜಯಪುರ, (ಸೆ.14):  ಗಣೇಶ ಮೂರ್ತಿ ವಿಸರ್ಜನೆ ವೇಳೆ ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿರುವ ಘಟನೆ ಗುರುವಾರ ರಾತ್ರಿ ವಿಜಯಪುರದಲ್ಲಿ ನಡೆದಿದೆ. ನಗರದ ಬಿಎಲ್ ಡಿ ಇಂಜಿನಿಯರಿಂಗ್ ‌ಕಾಲೇಜ್ ಬಳಿ ಈ ಘಟನೆ ನಡೆದಿದೆ.

ಆಶ್ರಮ ಬಡವಾವಣೆಯ ಲಕ್ಷ್ಮೀ ಗಜಾನನ ತರುಣ ಮಂಡಳಿ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಎಪಿಂಸಿ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೆರಳಿದ ಮೆರವಣಿಗಾರರು ಪೊಲೀಸರ ಜೊತೆ ವಾಗ್ವಾದಕ್ಕೆ ಇಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮಂಜಾಗ್ರತಾ ಕ್ರಮವಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ್ದಾರೆ.

ಮೆರವಣಿಗೆ ವೇಳೆ ಪೊಲೀಸರು ದೌರ್ಜನ್ಯ ಎಸಗ್ದಿಾರೆ ಎಂದು ಮಂಡಳಿಯ ಸದಸ್ಯರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನ ಪೊಲೀಸರು ತಳ್ಳಿ ಹಾಕಿದ್ದು, ಟ್ರಾಫಿಕ್ ಜಾಮ್ ಆದ ಕಾರಣ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಎಪಿಎಂಸಿ ಠಾಣೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.