ನಿನ್ನೆ ತಡರಾತ್ರಿ ವೃತ್ತ ನಿರೀಕ್ಷಕ ರಾಘವೇಂದ್ರ ತನ್ನ ರಿವಾಲ್ವರ್’ನಿಂದ ಠಾಣೆಯ ತನ್ನ ಕೋಣೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ | ರೌಂಡ್ಸ್’ಗೆ ಹೋಗಿ ಬಂದು ಏಕಾಏಕಿ ರಾಘವೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ಸಂಶಯಗಳನ್ನು ಹುಟ್ಟುಹಾಕಿದೆ.

ಆನೇಕಲ್ ( ಅ.18): ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲೇ ಗುಂಡು ಹಾರಿಸಿಕೊಂಡು ಪೊಲೀಸ್ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ನಿನ್ನೆ ತಡರಾತ್ರಿ ವೃತ್ತ ನಿರೀಕ್ಷಕ ರಾಘವೇಂದ್ರ ತನ್ನ ರಿವಾಲ್ವರ್’ನಿಂದ ಠಾಣೆಯ ತನ್ನ ಕೋಣೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೌಂಡ್ಸ್’ಗೆ ಹೋಗಿ ಬಂದು ಏಕಾಏಕಿ ರಾಘವೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಳ ಸಂಶಯಗಳನ್ನು ಹುಟ್ಟುಹಾಕಿದೆ.

ಒಂದೆಡೆ ಮರಳು ಮಾಫಿಯಾ ಹಾಗೂ ಮೇಲಾಧಿಕಾರಿಗಳಿಂದ ಒತ್ತಡವಿತ್ತು ಎಂಬ ಮಾತುಗಳು ಕೇಳಿಬಂದಿವೆಯಾದರೆ, ಕೌಟಂಬಿಕ ಸಮಸ್ಯೆಗಳಿತ್ತು ಎಂಬ ಮಾತುಗಳು ಕೇಳಿಬಂದಿವೆ.

ರಾಘವೇಂದ್ರ ಕಳೆದ 2012, 2013, 2014 ರಲ್ಲಿ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಆಗಿ ಕಾರ್ಯ ನಿರ್ವಹಿಸಿದ್ದರು.

2014 ರಲ್ಲಿ ಲೋಕಾಯುಕ್ತ ದಾಳಿಗೆ ಒಳಗಾದ ನಂತರ ಒಂದು ವಾರ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು.

ನಂತರ ಲೋಕಾಯುಕ್ತ ಪ್ರಕರಣದಿಂದ ಮುಕ್ತರಾದ ಮೇಲೆ ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.