ಎರಡು ಬಾರಿ ನಾನು ಹಾಗೂ ಸಿಎಂ ‌ಈ ಬಗ್ಗೆ ಚರ್ಚೆ ಮಾಡಿದ್ದೇವೆ, ವೇತನ ಹೆಚ್ಚಳ ಬಗ್ಗೆ ಸಿಎಂ ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಹಾಸನ (ಅ.31): ಶೀಘ್ರದಲ್ಲೇ ಪೊಲೀಸರ ವೇತನದಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್​ ಹೇಳಿದ್ದಾರೆ.

ಔರಾದ್ಕರ್ ಸಮಿತಿ ನೀಡಿರುವ ವರದಿಯನ್ನು ಪರಿಶೀಲಿಸಲಾಗುತ್ತಿದೆ, ಎರಡು ಬಾರಿ ನಾನು ಹಾಗೂ ಸಿಎಂ ‌ಈ ಬಗ್ಗೆ ಚರ್ಚೆ ಮಾಡಿದ್ದೇವೆ, ವೇತನ ಹೆಚ್ಚಳ ಬಗ್ಗೆ ಸಿಎಂ ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಪೊಲೀಸರು ಪ್ರತಿಭಟನೆ ಮಾಡುವುದು ಸರಿಯಲ್ಲ, ಅವರು ಮತ್ತೆ ಪ್ರತಿಭಟನೆ ಮಾಡುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಪರಮೇಶ್ವರ್​ ಹೇಳಿದ್ದಾರೆ.