ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಹರಸಾಹಸಪಡುವಂತಾಗಿದೆ. ಇದೇ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಳಿ ಮನೆಯಿಂದ ಹೊರಬಾರದಂತೆ ಮನವಿ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ
ಬೆಂಗಳೂರು(ಸೆ.05): ಬಿಜೆಪಿ ಕಾರ್ಯಕರ್ತರು ಮಂಗಳೂರು ಚಲೋ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದಾರೆ. ಹೀಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರ ಹರಸಾಹಸಪಡುವಂತಾಗಿದೆ. ಇದೇ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಬಳಿ ಮನೆಯಿಂದ ಹೊರಬಾರದಂತೆ ಮನವಿ ಮಾಡಿಕೊಂಡಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
ಯಡಿಯೂರಪ್ಪ ಡಾಲರ್ಸ್ ಕಾಲೋನಿಯಲಗಲಿರುವ ತಮ್ಮ ನಿವಾಸದಲ್ಲಿದ್ದಾರೆ. ಇವರು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್ನಿಂದ ಹೊರಡಬೇಕಿದ್ದ ಬೆಂಗಳೂರಿನ ಬಿಜೆಪಿ ಕಾರ್ಯಕರ್ತರ ರ್ಯಾಲಿಗೆ ಚಾಲನೆ ನೀಡಬೇಕಿತ್ತು ಆದರೆ ಬಿಎಸ್ವೈ ಭಾಗಿಯಾದ್ರೆ ಕಾರ್ಯಕರ್ತರು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಮ್ಮ ನಿವಾಸದಿಂದ ಹೊರಬರದಿರುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತ ಯಡಿಯೂರಪ್ಪ ಮಾತ್ರ ಱಲಿ ಬಗ್ಗೆ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಾಗಿ ಉಳಿದು ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
