ಇಂದು ಪ್ರಧಾನಿ ನರೇಂದ್ರ ಮೋದಿ 68ನೇ ಜನ್ಮದಿನ ! ವಾರಾಣಸಿಯ ಶಾಲಾ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಣೆ! 1950ರಂದು ಗುಜರಾತ್ನ ವಡಾನಗರ್ನಲ್ಲಿ ಜನಸಿದ್ದ ಮೋದಿ! ಪ್ರಧಾನಿಗೆ ಹರಿದು ಬಂದ ಶುಭಾಶಯಗಳ ಮಹಾಪೂರ
ನವದೆಹಲಿ(ಸೆ.17): ಇಂದು ಪ್ರಧಾನಿ ನರೇಂದ್ರ ಮೋದಿ ಅವರ 68ನೇ ಜನ್ಮದಿನ. ಇಂದು ತಮ್ಮ ಸ್ವಕ್ಷೇತ್ರ ವಾರಾಣಸಿಯಲ್ಲಿ ಶಾಲಾ ಮಕ್ಕಳೊಂದಿಗೆ ಮೋದಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.
ಈ ಮಧ್ಯೆ ಪ್ರಧಾನಿ ಮೋದಿ ಅವರಿಗೆ ಹುಟ್ಟುಹಬ್ಬದ ಪ್ರಯುಕ್ತ ಶುಭಾಷಯಗಳ ಮಹಾಪೂರವೇ ಹರಿದು ಬರುತ್ತಿದ್ದು, ಪ್ರಮುಖವಾಗಿ ರಾಷ್ಟ್ರಪತಿ ರಾಮಮಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೇಂದ್ರ ಸಚಿವ ರಾಜನಾಥ್ ಸಿಂಗ್, ಅರುಣ್ ಜೇಟ್ಲಿ, ಸುಷ್ಮಾ ಸ್ವರಾಜ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ವಿಪಕ್ಷ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಪಿಎಂ ಹೆಚ್.ಡಿ. ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಮೋದಿ ಅವರಿಗೆ ಶುಭಾಷಯ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಹುಟ್ಟುಹಬ್ಬ ಹಿನ್ನಲೆಯಲ್ಲಿ ಮೋದಿಯವರಿಗೆ ಸದಾಕಾಲ ಉತ್ತಮ ಆರೋಗ್ಯ ಹಾಗೂ ಸಂತೋಷ ಸಿಗಲೆಂದು ಕೋರುತ್ತೇನೆಂದು ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿಯವರೂ ಕೂಡ ಟ್ವೀಟ್ ಮಾಡಿದ್ದು, ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರುತ್ತೇನೆ. ದೇವರು ತಮಗೆ ಆಯುಷ್ಯ, ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ. ಜನ್ಮದಿನದ ಶುಭಾಶಯಗಳು ನರೇಂದ್ರ ಮೋದಿಯವರೇ. ನಿಮಗೆ ಉತ್ತಮ ಆರೋಗ್ಯ. ದೀರ್ಘ ಆಯುಷ್ಯ ಮತ್ತು ಜನರಿಗೆ ನೀವು ನೀಡಿದ ಭರವಸೆಗಳನ್ನು ಈಡೇರಿಸುವ ಶಕ್ತಿ ಸಿಗಲಿ ಎಂದು ಹಾರೈಸುತ್ತೇನೆಂದಿದ್ದಾರೆ.
ಅದರಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಮುಖೇನ ಜನ್ಮದಿನದ ಶುಭಾಷಯ ತಿಳಿಸಿದ್ದು, ಉತ್ತಮ ಆರೋಗ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

ಇನ್ನು ಈ ಬಾರಿಯ ಭುವನ ಸುಂದರಿ ಮಾನುಷಿ ಚಿಲ್ಲರ್ ಕೂಡ ಪ್ರಧಾನಿ ಮೋದಿಗೆ ಜನ್ಮ ದಿನದ ಶುಭಾಷಯ ತಿಳಿಸಿದ್ದು, ಮಿಸ್ ವರ್ಲ್ಡ್ ಆದ ಬಳಿಕ ಮೋದಿ ಅವರನ್ನು ಭೇಟಿಯಾದ ಸಂದರ್ಭವನ್ನು ನೆನಪಿಸಿಕೊಂಡಿದ್ದಾರೆ.
