ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನಡೆಸಿದ ಚುನಾವಣಾ ಸಮೀಕ್ಷೆಗೆ ಹಲವು ರಾಜಕೀಯ ನಾಯಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಬೆಂಗಳೂರು(ಡಿ.8): ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ನಡೆಸಿದ ಚುನಾವಣಾ ಸಮೀಕ್ಷೆಗೆ ಹಲವು ರಾಜಕೀಯ ನಾಯಕರಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿದೆ.

ಬೀದರ್​ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಮೀಕ್ಷೆಯ ಸಂಪೂರ್ಣ ವಿವರ ತರಿಸಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

ಅಲ್ಲದೇ ಈ ಸಮೀಕ್ಷೆಯ ವೇಳೆ ಕಂಡು ಬಂದಂತೆ ಯಾವ ಯಾವ ಕ್ಷೇತ್ರಗಳಲ್ಲಿ ಬಿಜೆಪಿ ಸಂಘಟನೆ ಕೊರತೆ ಇದೆಯೋ ಆ ಕ್ಷೇತ್ರಗಳತ್ತ ಹೆಚ್ಚಿನ ಗಮನ ಹರಿಸೋದಾಗಿ ಹೇಳಿದ್ದಾರೆ.