ನವದೆಹಲಿ, [ಡಿ.12] : ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಇದ್ರಿಂದ ಎಚ್ಚೆತ್ತುಕೊಂಡಿರುವ ಬಿಜೆಪಿ ಹೈಕಮಾಂಡ್ ದಿಢೀರ್ ಸಭೆ ಕರೆದಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ನಾಳೆ ಅಂದರೆ ಡಿಸೆಂಬರ್ 13ರಂದು ದೇಶದ ಎಲ್ಲ ರಾಜ್ಯದ ಬಿಜೆಪಿ ಅಧ್ಯಕ್ಷರು, ರಾಜ್ಯ ಪ್ರಭಾರಿಗಳು, ಸಹ ಪ್ರಭಾರಿಗಳು, ರಾಷ್ಟ್ರೀಯ ಕಾರ್ಯದರ್ಶಿಗಳು, ರಾಜ್ಯ ಸಂಘಟನಾ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ.

ಪಂಚ ರಾಜ್ಯಗಳಲ್ಲಿ ಬಿಜೆಪಿಗೆ ಹಿನ್ನಡೆ: ಯಡಿಯೂರಪ್ಪ ಹೇಳಿದ್ದೇನು?

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಾಳೆ ಮಧ್ಯಾಹ್ನದ ಮೇಲೆ ಸಭೆ ನಡೆಯಲಿದ್ದು, ಸಭೆಯಲ್ಲಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಸೋಲಿಗೆ ಕಾರಣ ಹಾಗೂ ಮುಂಬರುವ ಲೋಕಸಭಾ ಚುನಾವಣೆಯ ಕಾರ್ಯ ತಂತ್ರಗಳ ಕುರಿತು ಚರ್ಚೆ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬೆಳಗಾವಿಯ ಅಧಿವೇಶನದ ಹಿನ್ನಲೆಯಲ್ಲಿ ಮಿತ್ ಶಾ ಕರೆದ ಸಭೆಗೆಯಲ್ಲಿ ಪಾಲ್ಗೊಳ್ಳದಿರಲು ನಿರ್ಧರಿಸಿದ್ದಾರೆ.