ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ ನಾಳೆ (ಮೇ.26) ಮತ್ತು ಭಾನುವಾರ (ಮೇ.27) ರಂದು ಬೆಂಗಳೂರಿನ ಹಲವೆಡೆ  ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಕೆಲವೆಡೆ ನಾಳೆ ಮೆಟ್ರೋ ಕಾಮಗಾರಿ ಪ್ರಾರಂಭವಾಗಲಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟನೆ ನೀಡಿದೆ. 

ಬೆಂಗಳೂರು(ಮೇ. 25):ಮೆಟ್ರೋ ಕಾಮಗಾರಿ ನಡೆಯುತ್ತಿರುವ ಕಾರಣ ನಾಳೆ (ಮೇ.26) ಮತ್ತು ಭಾನುವಾರ (ಮೇ.27) ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ನಗರದ ಕೆಲವೆಡೆ ನಾಳೆ ಮೆಟ್ರೋ ಕಾಮಗಾರಿ ಪ್ರಾರಂಭವಾಗಲಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸ್ಪಷ್ಟನೆ ನೀಡಿದೆ.

ನಗರದ ಮಾರತಹಳ್ಳಿ, ಕೋರಮಂಗಲ, ಚಲ್ಲಗಟ್ಟ ಸೇರಿದಂತೆ ಕೆಲವೆಡೆ ಬೆಳಗ್ಗೆ 10 ಗಂಟೆಯಿಂದ ಸಂಜೆ ೬ ಗಂಟೆವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಅದರಂತೆ ಹೆಚ್ಎಎಲ್, ಅನ್ನಸಂದ್ರ ಪಾಳ್ಯ, ಬಸವನಗರ, ಇಸ್ಲಾಂಪುರ, ಮಲ್ಲೇಶಪಾಳ್ಯ, ಆಡುಗೋಡಿ ಸೇರಿದಂತೆ ಇನ್ನೂ ಹಲವೆಡೆ ವಿದ್ಯುತ್ ಸಂಪರ್ಕ ತಾತ್ಕಾಲಿಕವಾಗಿ ಕಡಿತಗೊಳ್ಳಲಿದೆ.

ಮೆಟ್ರೋದ ನಾಲ್ಕನೆ ಹಂತದ ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವು ಪ್ರಮುಖ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ತಾತ್ಕಾಲಿಕವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಇಲಾಖೆಗೆ ಮನವಿ ಮಾಡಿದ್ದೇವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.