ಗೌರಿ ಲಂಕೇಶ್ ಹತ್ಯೆ ನಿಜವಾದ ಆರೋಪಿಗಳ ಬಂಧನವಾಗಲಿ : ಜೋಷಿ

First Published 10, Mar 2018, 3:13 PM IST
Prahlad Joshi Talk About Gauri Lankesh Murder Case
Highlights

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಯಾರೂ ಸಿಕ್ಕಿಲ್ಲ ಎಂದು ನವೀನ್ ಬಂಧಿಸಿ ಫಿಟ್ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಲೇಬೇಕು. ನಿಜವಾದ ಹಂತಕರ ಬಂಧನವಾಗಬೇಕು ಎಂದು ಅವರು ಹೇಳಿದ್ದಾರೆ.

ಹುಬ್ಬಳ್ಳಿ : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಸಂಸದ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದಲ್ಲಿ ಯಾರೂ ಸಿಕ್ಕಿಲ್ಲ ಎಂದು ನವೀನ್ ಬಂಧಿಸಿ ಫಿಟ್ ಮಾಡಲಾಗಿದೆ. ಈ ಬಗ್ಗೆ ಸಂಪೂರ್ಣ ತನಿಖೆ ನಡೆಯಲೇಬೇಕು. ನಿಜವಾದ ಹಂತಕರ ಬಂಧನವಾಗಬೇಕು ಎಂದು ಅವರು ಹೇಳಿದ್ದಾರೆ.

ಇನ್ನು ಜಗದೀಶ್ ಶೆಟ್ಟರ್ ರಾಜ್ಯಪಾಲರಾಗುತ್ತಾರೆ ಎನ್ನುವ ಬಗ್ಗೆ ಸುದ್ದಿ ಹಬ್ಬಿದ್ದು, ಇದೊಂದು ಸುಳ್ಳು ಸುದ್ದಿಯಾಗಿದೆ.  ಅವರು ರಾಜ್ಯದಲ್ಲಿಯೇ ಇರುತ್ತಾರೆ ಎಂದಿದ್ದಾರೆ.

ನಗರಗಳಲ್ಲಿ ಎಟಿಎಂಗಳು ಬಂದಾಗಿರುವ ಬಗ್ಗೆ ಪ್ರಸ್ತಾಪಿಸಿದ ಅವರು ಇದರಿಂದ ಜನರು ಸಮಸ್ಯೆ ಎದುರಿಸುತ್ತಿದ್ದು, ಪೊಲೀಸ್ ಕಮಿಷನರ್ ಸೂಕ್ತ ಭದ್ರತೆ ಒದಗಿಸಿ, ಇಲ್ಲವಾದರೆ ಎಟಿಎಂ ಬಂದ್ ಮಾಡಿ ಎಂದು ಬ್ಯಾಂಕ್’ಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳೇ ಸೂಕ್ತ ಕ್ರಮ ಜರುಗಿಸಬೇಕು. ಬ್ಯಾಂಕ್’ಗಳು ಗ್ರಾಹಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

loader