ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಟುಂಬದಿಂದ ಇಬ್ಬರೇ ಸ್ಪರ್ಧಿಸಲಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕುಟುಂಬದಿಂದ ಇಬ್ಬರೇ ಸ್ಪರ್ಧಿಸಲಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಪಕ್ಷದ ಮುಖಂಡ ಎಚ್. ಡಿ.ರೇವಣ್ಣ ಅವರ ಪುತ್ರ ಪ್ರಜ್ವಲ್ ಇತ್ತೀಚೆಗೆ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಸ್ಪರ್ಧಿಸುವ ಬಯಕೆ ಇರುವ ಬಗ್ಗೆ ಕ್ಷೇತ್ರದ ಮುಖಂಡರ ಸಭೆ ಯಲ್ಲಿ ಪ್ರಸ್ತಾಪಿಸಿದ್ದರು.
ಬಂಡಾಯ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆಗೆ ತಿರುಗೇಟು
ಜಮೀರ್‌ಗೆ ತಿರುಗೇಟು ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಮಹತ್ವವನ್ನು ರಾಷ್ಟ್ರೀಯ ಪಕ್ಷಗಳಿಗೆ ಗೊತ್ತಾಗುವಂತೆ ಮಾಡುತ್ತೇವೆ. ಯಾವುದೇ ಸಂದರ್ಭದಲ್ಲಿಯೂ ನಾನಾಗಲಿ, ರೇವಣ್ಣ ಆಗಲಿ ರಾಷ್ಟ್ರೀಯ ಪಕ್ಷಗಳ ಬಾಗಿಲು ತಟ್ಟುವುದಿಲ್ಲ. ಸ್ವಾಭಿಮಾನದಿಂದ ಪಕ್ಷ ಕಟ್ಟಿ ಬೆಳೆದು ತೋರಿಸುತ್ತೇವೆ. ಎಲ್ಲಿ ಎಡವಿದ್ದೇವೆ, ಎಲ್ಲಿ ಸರಿಪಡಿಸಿಕೊಳ್ಳಬೇಕು ಎಂಬುದನ್ನು ಅರ್ಥ ಮಾಡಿಕೊಂಡಿದ್ದೇವೆ.
ಎಚ್.ಡಿ.ಕುಮಾರಸ್ವಾಮಿ
ಈ ಬಗ್ಗೆ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವ ವೇಳೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮುಂದಿನ ಚುನಾವಣೆ ಯಲ್ಲಿ ಕುಟುಂಬದಿಂದ ಯಾರು ಕಣಕ್ಕಿಳಿಯಬೇಕು ಎಂದು ಈಗಾಗಲೇ ತೀರ್ಮಾನಿಸಲಾಗಿದೆ. ನಾನು ಮತ್ತು ರೇವಣ್ಣ ಇಬ್ಬರೇ ಸ್ಪರ್ಧಿಸಲಿದ್ದೇವೆ.
ಪ್ರಜ್ವಲ್ ಮತ್ತು ನಿಖಿಲ್ ಸ್ಪರ್ಧಿ ಸುವುದಿಲ್ಲ. ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿಸಿ ಕೊಳ್ಳಲಿದ್ದಾರೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು
