ಪ್ರಜ್ವಲ್ ರೇವಣ್ಣಗೆ ಲೋಕಸಭಾ ಟಿಕೆಟ್ ಪಕ್ಕಾ : ಎಲ್ಲಿಂದ..?

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 13, Aug 2018, 8:50 AM IST
Prajwal Revanna Contest Lok Sabha Election From Hassan
Highlights

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧೆಯನ್ನು ಸ್ವತಃ ಜೆಡಿಎಸ್ ಮುಖಂಡ ಮಾಜಿ ಪ್ರಧಾನಿ  ದೇವೇಗೌಡ ಅವರು ಖಚಿತಪಡಿಸಿದ್ದಾರೆ. ಹಾಸನದಿಂದ ಪ್ರಜ್ವಲ್ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ.

ಹಾಸನ :  ಮುಂದಿನ ಲೋಕಸಭಾ ಚುನಾವಣೆಯಲ್ಲಿ  ಪ್ರಜ್ವಲ್ ರೇವಣ್ಣ ಅವರನ್ನು ಹಾಸನ  ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. ಈ ಮೂಲಕ ಪ್ರಜ್ವಲ್ ಸ್ಪರ್ಧೆಯನ್ನು ದೇವೇಗೌಡ ಅವರು ಖಚಿತಪಡಿಸಿದ್ದಾರೆ. 

ಇನ್ನು ಇದೇ ವೇಳೆ ಕಾಂಗ್ರೆಸ್ ನೊಂದಿಗಿನ ಮೈತ್ರಿಗೆ ಧಕ್ಕೆಯಾಗದಂತೆ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಎದುರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೇ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯಾವುದೇ ಮೈತ್ರಿಯನ್ನು  ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಯಾರಿಂದಲೂ ಕೂಡ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರ ಮಾಡಲು ಸಾಧ್ಯವಿಲ್ಲ.  ಲೋಕಸಭಾ ಚುನಾವಣೆ ಬಳಿಕವೂ ಕೂಡ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ. ಸುಸೂತ್ರವಾಗಿ ಮುಂದುವರಿಯಲಿದೆ ಎಂದು ಹೇಳಿದ್ದಾರೆ. 

ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿಯವರು ಎಂಪಿ ಚುನಾವಣೆಗೂ ಸರ್ಕಾರ ಅಸ್ಥಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಅಲ್ಲದೇ ಲೋಕಸಭಾ ಚುನಾವಣೆಗಿಂತ ಮುಂಚೆ ಕುಮಾರಸ್ವಾಮಿಯನ್ನ ಅಧಿಕಾರದಿಂದ ಇಳಿಸಲು ಬಿಜೆಪಿ ಯತ್ನ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

loader