ಹುಬ್ಬಳ್ಳಿ: ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ ಜೋಶಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಒತ್ತಾಯಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದಾರೆ. ಹೀಗಾಗಿ ಕರ್ನಾಟಕಕ್ಕೆ ಕನಿಷ್ಠ ನಾಲ್ಕೈದು ಸಚಿವ ಸ್ಥಾನಗಳನ್ನು ನೀಡಬೇಕು ಎಂಬುದು ನಮ್ಮ ಆಶಯವಾಗಿದೆ. 

ನಮ್ಮ ಆಶಯವನ್ನು ಬಿಜೆಪಿ ವರಿಷ್ಠರಿಗೆ ತಿಳಿಸುತ್ತೇವೆ. ಅದರಲ್ಲೂ, ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಪ್ರಹ್ಲಾದ ಜೋಶಿ ಅವರಿಗೆ ಕೇಂದ್ರ ಸಚಿವ ಸ್ಥಾನ ನೀಡಬೇಕು ಎಂಬುದು ನನ್ನ ಒತ್ತಾಯ ಎಂದರು. ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.