‘ರಕ್ತಚೆಲ್ಲಿಯಾದ್ರೂ ದತ್ತಪೀಠವನ್ನ ಹಿಂದೂ ಪೀಠವಾಗಿಸ್ತೇವೆ’
ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಮುತಾಲಿಕ್ ಚಾಲನೆ ನೀಡಿ ಮಾತನಾಡಿದ್ದು, ಅವರು ಏನೆಲ್ಲ ಮಾತನಾಡಿದ್ದಾರೆ ಎನ್ನುವುದು ಇಲ್ಲಿದೆ.
ಚಿಕ್ಕಮಗಳೂರು, [ಅ.28]: ರಕ್ತ ಚೆಲ್ಲಿಯಾದರೂ ದತ್ತಪೀಠವನ್ನ ಹಿಂದೂಗಳ ಪೀಠವಾಗಿಸಿ ಸರ್ಕಾರಕ್ಕೆ ಸ್ಪಷ್ಟಪಡಿಸುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಗರದಲ್ಲಿ ಶ್ರೀರಾಮಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ದತ್ತಮಾಲಾ ಅಭಿಯಾನದ ಅಂತಿಮ ದಿನವಾದ ಇಂದು ಶೋಭಾಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಮುತಾಲಿಕ್ , ರಾಜಕೀಯ ಮುಖಂಡರ ವಿಳಂಬ ನೀತಿಯ ವಿರುದ್ಧ ವಾಗ್ದಾಳಿ ನಡೆಸಿದರು.
ದತ್ತಪೀಠ ವಿವಾದವನ್ನು ಶಾಂತಿಯಿಂದಲೇ ಬಗೆಹರಿಸಬಹುದು. ಆದರೆ ವಿವಾದವನ್ನು ಜೀವಂತವಾಗಿರುವಂತೆ ರಾಜಕಾರಣಿಗಳು, ಬುದ್ಧಿಜೀವಿಗಳು ನೋಡಿಕೊಳ್ಳುತ್ತಿದ್ದಾರೆ.
ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ ಅವರು ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿದ್ದರು. ಇಂದು ದೇವೇಗೌಡ ಅವರ ಪುತ್ರರಾದ ಎಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾರೆ.
ತಂದೆಯಂತೆ ಇಂದು ದತ್ತಪೀಠ ವಿವಾದವನ್ನ ಬಗೆಹರಿಸಿ ಹಿಂದೂಗಳಿಗೆ ನೀಡಬೇಕೆಂದು ಎಂದು ಮನವಿ ಮಾಡಿದರು.