ತುಮಕೂರು [ಜು.16] : ರಾಜ್ಯ ರಾಜಕೀಯ ಡೋಲಾಯಮಾನವಾದ ಈ ಸಂದರ್ಭದಲ್ಲೇ ಜೆಡಿಎಸ್ ಹಿರಿಯ ನಾಯಕ ಎಚ್.ಡಿ.ದೇವೇಗೌಡರ ವಿರುದ್ಧ ಸ್ವಾಮೀಜಿಯೋರ್ವರು ಅಸಮಾಧಾನ ಹೊರಹಾಕಿದ್ದಾರೆ. 

ತುಮಕೂರಿನಲ್ಲಿ ಮಾತನಾಡಿದ ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಸ್ವಾಮೀಜಿ ಮಾಜಿ ಪ್ರಧಾನಿ ದೇವೇಗೌಡರು ನಾಯಕ ಸಮುದಾಯದ ನಾಯಕರನ್ನ ತುಳಿಯುವ ಪ್ರಯತ್ನ ಮಾಡಬಾರದು ಎಂದಿದ್ದಾರೆ. 

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ದೇವೇಗೌಡರಿಗೆ, ಕುಮಾರಸ್ವಾಮಿ ಅವರಿಗೆ ನಾಯಕ ಸಮುದಾಯದ ಮತ ಬೇಕು. ಆದ್ದರಿಂದ ಕೆ.ಎನ್.ರಾಜಣ್ಣರಂತಹ ನಾಯಕರನ್ನು ತುಳಿಯುವ ಕೆಲಸಕ್ಕೆ ಕೈ ಹಾಕಬಾರದು ಎಂದು ಪರೋಕ್ಷವಾಗಿ ಸ್ವಾಮೀಜಿ ಎಚ್ಚರಿಕೆ ಕೊಟ್ಟಿದ್ದಾರೆ.  

ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ದೇವೇಗೌಡರ ಸೋಲಿಗೆ ಕೆ.ಎನ್.ರಾಜಣ್ಣ ಅವರೇ ಕಾರಣ ಎಂಬ ಆರೋಪ ಕೇಳಿ ಬಂದಿತ್ತು. ಆದ್ದರಿಂದ  ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಸ್ಥಾನದಿಂದ ರಾಜಣ್ಣ ಅವರನ್ನು ಉಚ್ಚಾಟನೆ ಮಾಡಲು ಸರ್ಕಾರ ತೆರೆಯಮರೆಯ ಕಸರತ್ತು ಮಾಡುತ್ತಿದೆ ಎಂಬ ಆರೋಪ ಇತ್ತು. ಈ ನಿಟ್ಟಿನಲ್ಲಿ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.