ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಗರಂ ಆಗಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡುತ್ತಾ, ಕೋರ್ಟ್ ಹಾಲ್’ನಿಂದ ಕೂಗಾಡುತ್ತಾ ಹೊರ ಬಂದಿದ್ದಾರೆ.

ನವದೆಹಲಿ (ನ.10): ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿರುದ್ಧ ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಗರಂ ಆಗಿದ್ದಾರೆ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡುತ್ತಾ, ಕೋರ್ಟ್ ಹಾಲ್’ನಿಂದ ಕೂಗಾಡುತ್ತಾ ಹೊರ ಬಂದಿದ್ದಾರೆ.

ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟು ಹಂಚಿಕೆ ಹಗರಣದಲ್ಲಿ ನಿಮ್ಮ ಪಾತ್ರವಿದೆ ಎಂದು ಪ್ರಶಾಂತ್ ಭೂಷಣ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಆರೋಪ ಮಾಡಿದ್ದಾರೆ. ತನಿಖೆಯನ್ನು ಎಸ್ಐಟಿಗೆ ವಹಿಸಲು ಕೋರಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪ್ರಕರಣವನ್ನು ನ್ಯಾಯಾಧೀಶರ ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದಾರೆ. ಪ್ರಕರಣ ವರ್ಗಾಯಿಸಿರುವ ಮುಖ್ಯ ನ್ಯಾ. ಮಿಶ್ರಾ ನಡೆಗೆ ಪ್ರಶಾಂತ್ ಭೂಷಣ್ ಬೇಸರ ವ್ಯಕ್ತಪಡಿಸಿದ್ದಾರೆ. ಕೋರ್ಟ್ ಹಾಲ್’ನಿಂದ ಕೂಗಾಡುತ್ತಾ ಹೊರ ಬಂದಿದ್ದಾರೆ.

ಹಗರಣದಲ್ಲಿ ಕೆಲವು ನ್ಯಾಯಮೂರ್ತಿಗಳೂ ಭಾಗಿ ಶಂಕೆಯಿದೆ. ವಿಶ್ವಾಸಾರ್ಹ ತನಿಖೆ ನಡೆಸಬೇಕು. ಆಗ ಮಾತ್ರವೇ ನ್ಯಾಯಾಂಗದ ಮೇಲೆ ನಂಬಿಕೆ ಉಳಿಯಲು ಸಾಧ್ಯ ಎಂದು ಪ್ರಶಾಂತ್ ಭೂಷಣ್ ಹೇಳಿದ್ದಾರೆ.