ಮೈಸೂರಿನಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಂಧನವಾಗಿದೆ. ನಿಷೇಧದ ನಡುವೆಯೂ ಮೆರವಣಿಗೆ ನಡೆಸಿದ್ದರಿಂದ ಪ್ರತಾಪ್ ಸಿಂಹ ಸೇರಿ ಅನೇಕ ಕಾರ್ಯಕರ್ತರನ್ನು ಬಂಧಿಸಲಾಗಿದೆ. 

ಮೈಸೂರು(ಡಿ.3): ಮೈಸೂರಿನಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಂಧನವಾಗಿದೆ. ನಿಷೇಧದ ನಡುವೆಯೂ ಮೆರವಣಿಗೆ ನಡೆಸಿದ್ದರಿಂದ ಪ್ರತಾಪ್ ಸಿಂಹ ಸೇರಿ ಅನೇಕ ಕಾರ್ಯಕರ್ತರನ್ನು ಬಂಧಿಸಲಾಗಿದೆ. 

ನಿಗದಿತ ಮಾರ್ಗ ಬಿಟ್ಟು ಬೇರೆ ಮಾರ್ಗದಲ್ಲಿ ಹನುಮ ಮೆರವಣಿಗೆ ನಡೆಸುತ್ತಿದ್ದರು. ಹುಣಸೂರು ಪ್ರವೇಶಿಸುವ ವೇಳೆ ಪ್ರತಾಪ್ ಸಿಂಹ ಹಾಗೂ ಹಲವು ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಇನ್ನೊಂದೆಡೆ ಸಂಸದ ಪ್ರತಾಪ್ ಸಿಂಹ ಬಂಧನಕ್ಕೆ ಹಲವರಿಂದ ಆಕ್ರೋಶ ವ್ಯಕ್ತವಾಗಿದ್ದು, ಬಿಡುಗಡೆ ಮಾಡುವಂತೆ ಆಗ್ರಹಿಸಲಾಗಿದೆ.