ಹನುಮ ಜಯಂತಿ ವೇಳೆ ಹುಣಸೂರಿನಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಾಪ್ ಸಿಂಹ ಅವರನ್ನು ಬಂಧಿಸಿ, ಭಾನುವಾರ ರಾತ್ರಿ 11 ಗಂಟೆಗೆ ಬಿಡುಗಡೆ ಮಾಡಲಾಗಿತ್ತು.

ಮೈಸೂರು(ಡಿ.04): ನನ್ನ ರಾಜಕೀಯ ಭವಿಷ್ಯಕ್ಕಿಂತ ನನ್ನ ಧರ್ಮ ಸಂಪ್ರದಾಯ ನನಗೆ ಮುಖ್ಯ. ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಎಂದು ಒಪ್ಪಿಕೊಳ್ಳಿ ಎಂದು ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಚೆನ್ನಣ್ಣನವರ್'ಗೆ ಟ್ವಿಟರ್'ನಲ್ಲಿ ಸಂಸದ ಪ್ರತಾಪ್ ಸಿಂಹ ಸವಾಲ್ ಹಾಕಿದ್ದಾರೆ.

Add Asianetnews Kannada as a Preferred SourcegooglePreferred

ಮೈಸೂರಿನ ಹುಣಸೂರು ಹನುಮ ಜಯಂತಿ ಮೆರವಣಿಗೆ ಗೊಂದಲದ ಬಗ್ಗೆ ಟ್ವೀಟ್'ನಲ್ಲೇ ಪ್ರತಿಕ್ರಿಯೆ ನೀಡಿರುವ ಪ್ರತಾಪ್ ಸಿಂಹ, ಆಳುವವರ ಅಣತಿ ಮೀರುವ ಹಾಗಿಲ್ಲ ಅಲ್ವಾ ಸರ್..? ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ ಎಂದು ಎಸ್ಪಿ ಚೆನ್ನಣ್ಣನವರಿಗೆ ಟಾಂಗ್ ಕೊಟ್ಟಿದ್ದಾರೆ.

ಹನುಮ ಜಯಂತಿ ವೇಳೆ ಹುಣಸೂರಿನಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಾಪ್ ಸಿಂಹ ಅವರನ್ನು ಬಂಧಿಸಿ, ಭಾನುವಾರ ರಾತ್ರಿ 11 ಗಂಟೆಗೆ ಬಿಡುಗಡೆ ಮಾಡಲಾಗಿತ್ತು.