ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡ್ಗ ಪ್ರಥಮ್  ಬಹುಭಾಷಾ ನಟ ಪ್ರಕಾಶ್ ರೈ ಏಕವಚನದ ಪದಗಳನ್ನ ಬಳಸುವ ಮೂಲಕ ಪ್ರಥಮ್ ಮತ್ತೆ ಸುದ್ದಿಯಲ್ಲಿದ್ದಾರೆ.  

ಬೆಂಗಳೂರು (ಡಿ.12): ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡ್ಗ ಪ್ರಥಮ್ ಬಹುಭಾಷಾ ನಟ ಪ್ರಕಾಶ್ ರೈ ಏಕವಚನದ ಪದಗಳನ್ನ ಬಳಸುವ ಮೂಲಕ ಪ್ರಥಮ್ ಮತ್ತೆ ಸುದ್ದಿಯಲ್ಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"ತಮಗೆ ತಾವೇ ಹೇಳಿಕೊಳ್ಳುವಂತೆ ದೊಡ್ಡ ನಟ ಪ್ರಕಾಶ್ ರೈ ರವರಿಗೆ ಬಹಿರಂಗ ಪ್ರಶ್ನೆ. "ಏನ್ರೀ Prakash Raj so called ದೊಡ್ಡ ನಟ?! ಅವತ್ತು ಗೌರಿ ಲಂಕೇಶ್ ಹತ್ಯೆಯಾದಾಗ "ಈ ದೇಶದಲ್ಲಿ ಏನಾಗ್ತಿದೆ? ಅದು ಇದು ಅಂತ ಬಾಯಿಗೆ ಬಂದಂಗೆ ಎಲ್ಲಾ ಕೇಳಿ ಕೊನೆಯದಾಗಿ #just_asking ಅಂತಿದ್ರಿ. ಇವತ್ತು ಪರೇಶ್ ಮೇಸ್ತಾ ವಿಕೃತ ರೀತಿಯಲ್ಲಿ ಹತ್ಯೆಯಾಗಿದೆ. ಈ ರಾಜ್ಯದಲ್ಲಿ ಏನಾಗ್ತಿದೆ ಅಂತ ಇವಾಗ ಕೇಳಲ್ವಾ so called ದೊಡ್ಡ ನಟ (ಭಯಂಕರ)? ನರಕ ಅಂದ್ರೇನು ಅಂತ ಸಾಯೋಕೂ ಮುಂಚೆನೇ ತೋರಿಸಿದ್ದಾರೆ ಆ ನಾಯಿಗಳು. ಎಲ್ಲರಿಗೂ ಒಂದೇ ನ್ಯಾಯ ಇರಬೇಕಲ್ವೇನ್ರಿ ರೈ? ಹೊನ್ನಾವರದಲ್ಲಿ ಏನು ನಡೀತು ಅಂತ ಗೊತ್ತೇ ಇಲ್ವೇನ್ರಿ ಪ್ರಕಾಶ್ ರೈ ನಿಮಗೆ? ನಾನು ಹಿಂದು-ಮುಸ್ಲಿಂ ಅಂತ ಮಾತಾಡ್ತಿಲ್ಲ. ಮಾನವೀಯತೆ,ಮನುಷ್ಯತ್ವದ ಬಗ್ಗೆ ಮಾತಾಡ್ತಾ ಇದೀನಿ. ಇದು just asking ಅಲ್ಲ #purposefully_asking ಎಂದು ತಮ್ಮ ಪೇಜಿನಲ್ಲಿ ಪ್ರಥಮ್ ಬರೆದುಕೊಂಡಿದ್ದಾರೆ.