ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಜನತೆ ಸೊಕ್ಕು ಅಡಗಿಸುವ ತೀರ್ಪು ನೀಡಿದ್ದಾರೆ ಎಂದು ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. 

ಬಾಗಲಕೋಟೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ನಂಬರ್‌ ಒನ್‌ ಮಾಡಿದ್ದಾಗಿ ಹೇಳುತ್ತಿರುವುದು ಬೂಟಾಟಿಕೆ ಮಾತು ಎಂದು ಸಂಸದ ಪ್ರತಾಪ ಸಿಂಹ ಟೀಕಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲೆಯ ಜಮಖಂಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸುವ ಮೂಲಕ ಜನತೆ ಸೊಕ್ಕು ಅಡಗಿಸುವ ತೀರ್ಪು ನೀಡಿದ್ದಾರೆ. ಅವರಪ್ಪನಾಣೆಗೂ ಕುಮಾರಸ್ವಾಮಿ ಮುಖ್ಯಮಂತ್ರಿ ಆಗೋಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ ಮುನ್ನವೇ ಕುಮಾರಸ್ವಾಮಿ ಅವರಪ್ಪನ ಬಳಿ ಓಡಿಹೋಗಿ ನಿಮ್ಮ ಮಗನನ್ನೇ ಮುಖ್ಯಮಂತ್ರಿ ಮಾಡಿ, ಬೇಷರತ್‌ ಬೆಂಬಲ ಕೊಡ್ತೀವಿ ಅಂತ ಹೇಳಿದವರು ಯಾರು ಎಂದು ಪ್ರಶ್ನಿಸಿದರು.

ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ಡಿಕೆಶಿ ತಪ್ಪೊಪ್ಪಿಗೆ ಹೇಳಿಕೆ ವಿಚಾರ ಪ್ರಸ್ತಾಪಿಸಿ, ಉಪಚುನಾವಣೆಯಲ್ಲಿ ಡಿಕೆಶಿ ಸೋಲಿನ ಭಯದಿಂದ ತಪ್ಪೊಪ್ಪಿಕೊಳ್ಳುವ ನಾಟಕ ಮಾಡುತ್ತಿದ್ದಾರೆ.

ಕಳೆದ ಚುನಾವಣೆಯಲ್ಲಿ ಧರ್ಮ ವಿರೋಧಿ ಕೆಲಸ ಮಾಡಿದವರಿಗೆ ಜನ ಸರಿಯಾಗಿ ಪಾಠ ಕಲಿಸಿದ್ದಾರೆ. ಉಪಚುನಾವಣೆಯಲ್ಲೂ ಜನತೆ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.