ವಿಎಚ್’ಪಿ ನಾಯಕ ಪ್ರವೀಣ್ ತೊಗಾಡಿಯಾ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ

First Published 16, Jan 2018, 8:19 AM IST
Praveen Thogadiya News
Highlights

ವಿಎಚ್‌ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ, ಸೋಮವಾರ ಇಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ಅವರನ್ನು ಇಲ್ಲಿನ ಚಂದ್ರಮಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಅಹಮದಾಬಾದ್: ವಿಎಚ್‌ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ, ಸೋಮವಾರ ಇಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬಳಿಕ ಅವರನ್ನು ಇಲ್ಲಿನ ಚಂದ್ರಮಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ.

ಆದರೆ ತಕ್ಷಣಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡುವ ಸ್ಥಿತಿಯಲ್ಲಿ ಇಲ್ಲ ಎಂದು ವೈದ್ಯರು ತಿಳಿಸಿದ್ದರೆ. ಇದಕ್ಕೂ ಮುನ್ನ ಹಳೆಯ ಪ್ರಕರಣ ವೊಂದರಲ್ಲಿ ತೊಗಾಡಿಯಾರನ್ನು ಬಂಧಿಸಲು ರಾಜಸ್ಥಾನ ಪೊಲೀಸರು ಗುಜರಾತ್‌ಗೆ ಆಗಮಿಸಿದ್ದರು. ಆದರೆ ಈ ವೇಳೆ ಅವರು ನಾಪತ್ತೆಯಾಗಿ ದ್ದರು. ಈ ನಡುವೆ ತೊಗಾಡಿಯಾ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ. ಅವರನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ ಎಂದು ವಿಎಚ್‌ಪಿ ನಾಯಕರು ಆರೋಪಿಸಿದ್ದರು.

ಆದರೆ ಈ ಆರೋಪವನ್ನು ಪೊಲೀಸರು ನಿರಾಕರಿಸಿದ್ದರು. ಇದು ಸಾಕಷ್ಟು ಅನುಮಾನ ಮತ್ತು ಆತಂಕಕ್ಕೆ ಕಾರಣವಾಗಿತ್ತು. ಇದೆಲ್ಲದರ ನಡುವೆಯೇ ಸೋಮವಾರ ರಾತ್ರಿ ವೇಳೆ ತೊಗಾಡಿಯಾ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

loader