ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ  ಪ್ರವೀಣ್ ತೊಗಾಡಿಯಾ ಆಸ್ಪತ್ರೆಯಲ್ಲಿಯೇ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಸದ್ದಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅಹಮದಾಬಾದ್ (ಜ.16): ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಪ್ರವೀಣ್ ತೊಗಾಡಿಯಾ ಆಸ್ಪತ್ರೆಯಲ್ಲಿಯೇ ಸುದ್ದಿಗೋಷ್ಠಿ ನಡೆಸಿದ್ದಾರೆ. ನನ್ನ ಸದ್ದಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನನ್ನನ್ನು ಕೊಲ್ಲಲು ಯತ್ನಿಸಿದ್ದರು. ನನ್ನ ಹತ್ಯೆ ಮಾಡಲು ಒಳಸಂಚು ನಡೆಸಿದ್ದಾರೆ ಎಂದು ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. ಸುದ್ದಿಗೋಷ್ಠಿಯ ವೇಳೆ ಈ ವಿಚಾರವನ್ನು ಹೇಳಿ ತೊಗಾಡಿಯ ಭಾವೋದ್ವೇಗಕ್ಕೆ ಒಳಗಾಗಿದ್ದಾರೆ.

ನಿನ್ನೆ ನಾಪತ್ತೆಯಾಗಿದ್ದ ವಿಎಚ್’ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ತೊಗಾಡಿಯಾ ಅವರು ಸೋಮವಾರ ಅಹಮದಾಬಾದ್’ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಅವರನ್ನು ಇಲ್ಲಿನ ಚಂದ್ರಮಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.