ಹಿಸಾರ್, ಹರ್ಯಾಣ (ಸೆ. 28) : ಮಾಜಿ ವಿಶ್ವ ಹಿಂದೂ ಪರಿಷತ್ ಮುಖಂಡ  ಪ್ರವೀಣ್  ತೊಗಾಡಿಯಾ ಅವರು ನೂತನ ಪಕ್ಷವನ್ನು ಶೀಘ್ರವೇ ಆರಂಭ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. 

ಹರ್ಯಾಣದ ಹಿಸಾರ್  ನಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಪ್ರವೀಣ್ ತೊಗಾಡಿಯಾ ಅವರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಸವಾಲಾಗಿ ದೇಶದಲ್ಲಿ ನೂತನ ಪಕ್ಷ ಆರಂಭಿಸಲಾಗುವುದು ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ 2019ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆಯೂ ಮಾತನಾಡಿದ ಅವರು ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾದವರನ್ನು ಕ್ಷಮಿಸಬಹುದು. ಆದರೆ ಅವರ ಭಾವನೆಗಳೊಂದಿಗೆ ಆಟವಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಯಾರೇ ಅಧಿಕಾರಕ್ಕೆ ಬಂದರೂ ಕೂಡ ನಮ್ಮದು ಅಧಿಕಾರವಿದ್ದೇ ಇರುತ್ತದೆ. ಹಿಂದುತ್ವಕ್ಕಾಗಿ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ತೊಗಾಡಿಯಾ ಹೇಳಿದ್ದಾರೆ.