ಚಂಡ ಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಹಾಗೂ ತಮಿಳುನಾಡಿನ ಇತರೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚಂಡಮಾರುತದ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.
ಚೆನ್ನೈ (ಡಿ.01): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ತಮಿಳುನಾಡು ಹಾಗೂ ಪಾಂಡಿಚೇರಿಗೆ ‘ನಾಡಾ’ ಚಂಡಮಾರುತ ಭೀತಿ ಎದುರಾಗಿದೆ.
ತಮಿಳುನಾಡು ಮತ್ತು ಪುದುಚೇರಿಯಲ್ಲಿ ಇಂದಿನಿಂದಲೇ ಮಳೆಯಾಗುತ್ತಿದ್ದು ಆಂಧ್ರಪ್ರದೇಶ ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನೆಲ್ಲೆಡೆ ಮಳೆ ಬೀಳುವ ಸಂಭವವಿದೆ.
ಚಂಡ ಮಾರುತದ ಹಿನ್ನೆಲೆಯಲ್ಲಿ ಚೆನ್ನೈ ಹಾಗೂ ತಮಿಳುನಾಡಿನ ಇತರೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚಂಡಮಾರುತದ ಕಾರಣ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಸಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡ ಯಾವುದೇ ಸ್ಥಿತಿ ಎದುರಿಸಲು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಕಡಲ ತಡಿ ಹಾಗೂ ತಗ್ಗುಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
‘ನಾಡಾ’ ಚಂಡಮಾರುತದ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಚೆನ್ನೈ ಹಾಗೂ ತಮಿಳುನಾಡಿನ ಹಲವೆಡೆ ಕಳೆದ ವರ್ಷ ಡಿಸೆಂಬರ್‌ನಲ್ಲಿ ಉಂಟಾಗಿದ್ದ ಶತಮಾನದ ಭೀಕರ ಪ್ರವಾಹವು, ಚೆನ್ನೈ ನಿವಾಸಿಗಳನ್ನು ಬೆಚ್ಚಿಬೀಳಿಸಿತ್ತು. ನಗರ ಹಲವು ದಿನಗಳ ಕಾಲ ಮುಳುಗಡೆಯಾಗಿತ್ತು.
