ಕಲಬುರಗಿ (ನ.15): ಆಸ್ಪತ್ರೆಗಳಲ್ಲಿಯೇ ಹೆರಿಗೆ ಆಗಲಿ ಎಂದು ಸರ್ಕಾರ ಹತ್ತಾರು ಯೋಜನೆಗಳನ್ನು ಹಮ್ಮಿಕೊಂಡಿದೆ. ಆದರೆ ಸರಕಾರಿ ಆಸ್ಪತ್ರೆಗಳಲ್ಲಿನ ಸ್ಥಿತಿ ಮಾತ್ರ ಇದಕ್ಕೆ ತದ್ವಿರುದ್ದವಾಗಿದೆ.

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಇಂದು ನಡೆದ ದುರಂತವೇ ಇದಕ್ಕೆ ಸಾಕ್ಷಿಯಾಗಿದೆ. ವೈದ್ಯರ ನಿರ್ಲಕ್ಷ್ಯವು ಬಾಣಂತಿಯೊಬ್ಬಳನ್ನು ಬಲಿ ತೆಗೆದುಕೊಂಡಿದ್ದು, ಮೃತಳ ಕುಟುಂಬದವರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮರತೂರ ಗ್ರಾಮದ ನಿವಾಸಿ ಶಿವಲೀಲಾ  ಮೂರು ದಿನಗಳ ಹಿಂದೆ ಹೆಣ್ಣು ಮಗು ಜನ್ಮ ನೀಡಿದ್ದರು. ಆದರೆ ಹೆರಿಗೆ ಬಳಿಕ ತಾಯಿ ಆರೋಗ್ಯದಲ್ಲಿ   ವ್ಯತ್ಯಾಸವಾಗಿ  ಸಾವಿಗೀಡಾಗಿದ್ದಾರೆ.

ಈ ಹಿನ್ನೆಲೆಯಲ್ಲಿ  ವೈದ್ಯರ ನಿರ್ಲಕ್ಷ್ಯ ಸಾವಿಗೆ ಕಾರಣ ಅಂತ ಕುಟುಂಬದವರು ಆರೋಪಿಸಿದ್ದಾರೆ.  ಇನ್ನು ಇದಕ್ಕೆ ಪ್ರತಿಕ್ರಿಯಿಸಿದ  ವೈದ್ಯರು,  ಶಸ್ತ್ರಚಿಕಿತ್ಸೆ ಮಾಡಿ ಬಾಣಂತಿಯನ್ನು ಉಳಿಸಿಕೊಳ್ಳಲು ಶಕ್ತಿ ಮೀರಿ ಶ್ರಮಿಸಿದ್ದೇವೆ,  ಅದರೂ ಪ್ರಯೋಜನವಾಗಲಿಲ್ಲ. ಇದಕ್ಕೆ ವೈದ್ಯರ ನಿರ್ಲಕ್ಷತನ ಕಾರಣವಲ್ಲ  ಎಂದು  ಸರ್ಜನ್ ಜೋಶಿ  ಸಮರ್ಥಿಸಿಕೊಂಡಿದ್ದಾರೆ.