ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಪ್ರೇಮ್ ಕುಮಾರ್ ಧುಮಾಲ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನವದೆಹಲಿ (ಅ.31): ಹಿಮಾಚಲ ಪ್ರದೇಶದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಪ್ರೇಮ್ ಕುಮಾರ್ ಧುಮಾಲ್ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ನ. 09 ರಂದು ಹಿಮಾಚಲ ಪ್ರದೇಶದ ಒಟ್ಟು 68 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಡಿ. 18 ಕ್ಕೆ ಮತಎಣಿಕೆ ನಡೆಯಲಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪ್ರೇಮ್ ಕುಮಾರ್ ದುಮಾಲ್’ರನ್ನು ಘೋಷಿಸಿರುವುದು ಇದು ಎರಡನೇ ಬಾರಿಯಾಗಿದೆ. ಉತ್ತರ ಪ್ರದೇಶ ಮತ್ತು ಉತ್ತರಖಂಡ ಚುನಾವಣೆಯಾದಾಗ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯನ್ನ ಚುನಾವಣಾ ಮುನ್ನ ಘೋಷಿಸಿರಲಿಲ್ಲ. ಆದರೆ ಹಿಮಾಚಲಪ್ರದೇಶಕ್ಕೆ ಚುನಾವಣಾ ಮುನ್ನವೇ ಘೋಷಿಸಿದೆ.
