ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಇದರಿಂದ ಕೆಆರ್ ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ  ನಾಳೆ ಬಾಗೀನ ಅರ್ಪಣೆ ಮಾಡಲಿದ್ದಾರೆ. 

ಮಂಡ್ಯ : ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಇದರಿಂದ ಕೆಆರ್ ಎಸ್ ಅಣೆಕಟ್ಟೆ ಸಂಪೂರ್ಣ ಭರ್ತಿಯಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಳೆ ಬಾಗೀನ ಅರ್ಪಣೆ ಮಾಡಲಿದ್ದಾರೆ. 

ಆದರೆ ಬಾಗೀನ ಅರ್ಪಣೆ ಕಾರ್ಯಕ್ರಮಕ್ಕೆ ರಾಜಮನೆತನಕ್ಕೆ ಆಹ್ವಾನ ನೀಡಿಲ್ಲ. ಕಾರ್ಯಕ್ರಮಕ್ಕೆ ಆಹ್ವಾನಿಸದೇ ಮಂಡ್ಯ ಜಿಲ್ಲಾಡಳಿತ ಮೈಸೂರು ರಾಜ ವಂಶಸ್ಥರನ್ನು ಮರೆತಿದೆ.

ಮೈಸೂರು ರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಂದ ಕೆಆರ್ ಎಸ್ ಅಣೆಕಟ್ಟೆ ನಿರ್ಮಾಣವಾಗಿದ್ದು, ಇದೀಗ ಒಡೆಯರ್ ಕುಟುಂಬವನ್ನೇ ಕಾರ್ಯಕ್ರಮಕ್ಕೆ ಆಹ್ವನಿಸುವುದನ್ನು ಮರೆಯಲಾಗಿದೆ. 

ಆಹ್ವಾನ ಪತ್ರಿಕೆಯಲ್ಲಿ ರಾಜವಂಶಸ್ಥರಾದ ಯದುವೀರ್, ಪ್ರಮೋದಾ ದೇವಿ ಒಡೆಯರ್ ಹೆಸರು ಇಲ್ಲದಿದ್ದಕ್ಕೆ ಸಾರ್ವಜನಿಕರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.