ಕುಂದಾನಗರಿ ಬೆಳಗಾವಿಗೆ ಇಂದು (ಶನಿವಾರ) ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಆಗಮಿಸಲಿದ್ದಾರೆ. ಬೆಳಗಾವಿಯ ಕೆ.ಎಲ್​.ಎಸ್ ಕಾನೂನು ವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲು ರಾಷ್ಟ್ರಪತಿಗಳು ಬರ್ತಿದ್ದು, ಇವರ ಆಗಮನಕ್ಕೆ ಸಕಲ ಸಿದ್ಧತೆ ನಡೆದಿದೆ.

ಬೆಳಗಾವಿ, (ಸೆ.15): ಕುಂದಾನಗರಿ ಬೆಳಗಾವಿಗೆ ಇಂದು (ಶನಿವಾರ) ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಆಗಮಿಸಲಿದ್ದಾರೆ. ಬೆಳಗಾವಿಯ ಕೆ.ಎಲ್​.ಎಸ್ ಕಾನೂನು ವಿದ್ಯಾಲಯದ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲು ರಾಷ್ಟ್ರಪತಿಗಳು ಬರ್ತಿದ್ದು, ಇವರ ಆಗಮನಕ್ಕೆ ಸಕಲ ಸಿದ್ಧತೆ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ದೀಪಕ್​ ಮಿಶ್ರಾ, ಸಿಎಂ ಕುಮಾರಸ್ವಾಮಿ, ಭಾರತದ ಅಟಾರ್ನಿ ಜನರಲ್ ಕೆ.ಕೆ ವೇಣುಗೋಪಾಲ, ರಾಜ್ಯಪಾಲ ವಜುಬಾಯಿ ವಾಲಾ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದು, ಇವರನ್ನ ಬರಮಾಡಿಕೊಳ್ಳಲು ಕುಂದಾನಗರಿ ಸಿದ್ಧವಾಗಿದೆ. 

 ನಗರದ ಸುತ್ತಲೂ ಬಿಗಿ ಪೊಲೀಸ್​ ಬಂದೋಬಸ್ತ್​ ಏರ್ಪಡಿಸಲಾಗಿದ್ದು, ವೇದಿಕೆ ಸುತ್ತ ಸಿಸಿಟಿವಿ ಅಳವಡಿಸಲಾಗಿದೆ. ಕಳೆದ 15 ದಿನದಿಂದ ಈ ಸಮಾರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ಗಣ್ಯರು ತೆರಳುವ ಮಾರ್ಗ ವಧುವಿನಂತೆ ಶೃಂಗಾರಗೊಂಡಿದೆ. 

ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿದ ರಸ್ತೆ ಮೂಲಕ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ತೆರಳುತ್ತಾರೆ. ಬೆಳಗ್ಗೆ 11.30ರಿಂದ 12.30ರವರೆಗೆ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳನ್ನು ಹಾಗೂ ಸಾರ್ವಜನಿಕರನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ..