ರಾಜಭವನದ ಘನತೆಗೆ ಧಕ್ಕೆ ತರುವಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆಂದು ಆರೋಪಿಸಿ ಅಲ್ಲಿನ ಸಿಬ್ಬಂದಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ವಿ.ಷಣ್ಮುಗನಾಥನ್‌ ನಿನ್ನೆ ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ನವದೆಹಲಿ (ಜ.27): ಸಿಬ್ಬಂದಿಗಳಿಗೆ ಲೈಂಗಿಕ ಕಿರುಕುಳ ನೀಡುವ ಆರೋಪ ಹೊತ್ತಿದ್ದ ಮೇಘಾಲಯ ರಾಜ್ಯಪಾಲ ವಿ.ಷಣ್ಮುಗನಾಥನ್ ಅವರ ರಾಜಿನಾಮೆಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ.
ರಾಜಭವನದ ಘನತೆಗೆ ಧಕ್ಕೆ ತರುವಂತೆ ರಾಜ್ಯಪಾಲರು ವರ್ತಿಸುತ್ತಿದ್ದಾರೆಂದು ಆರೋಪಿಸಿ ಅಲ್ಲಿನ ಸಿಬ್ಬಂದಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು. ವಿ.ಷಣ್ಮುಗನಾಥನ್ ನಿನ್ನೆ ರಾತ್ರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಪುರುಷ ಸಿಬ್ಬಂದಿಗಳನ್ನು ಎತ್ತಂಗಡಿ ಮಾಡಿ, ರಾಜಭವನವನ್ನು ‘ಲೇಡಿಸ್ ಕ್ಲಬ್’ ಆಗಿ ಪರಿವರ್ತಿಸಿದ್ದಾರೆ ಎಂದು ಸಿಬ್ಬಂದಿಗಳು ಪತ್ರದಲ್ಲಿ ಆರೋಪಿಸಿದ್ದರು.
ಆರೆಸ್ಸೆಸ್ ಹಿನ್ನೆಲೆಯುಳ್ಳ 67 ವರ್ಷದ ಷಣ್ಮುಗನಾಥನ್ ಅವರನ್ನು 2015ರಲ್ಲಿ ಎನ್’ಡಿಎ ಸರ್ಕಾರವು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಿತ್ತು.
