ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಹಿ ಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹತ್ವದ ಜಿಎಸ್ ಟಿ ಮಸೂದೆಯನ್ನು ರಾಷ್ಟ್ರಪತಿಗಳ ಸಹಿಗಾಗಿ ಕಳುಹಿಸಲಾಗಿತ್ತು. ಈ ವಿಧೇಯಕಕ್ಕೆ ಈಗಾಗಲೇ 16 ರಾಜ್ಯಗಳು ಒಪ್ಪಿಗೆ ನೀಡಿದ್ದರಿಂದ ಶೇ.50 ರಷ್ಟು ರಾಜ್ಯಗಳ ಒಪ್ಪಿಗೆ ಸಿಕ್ಕಂತಾಗಿತ್ತು.

ಹೀಗಾಗಿ ರಾಷ್ಟ್ರಪತಿಗಳು ಇಂದು ತಮ್ಮ ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರ ಈ ಜಿಎಸ್ ಟಿಯನ್ನು 2017ರ ಏಪ್ರಿಲ್ 1ರಿಂದ ಜಾರಿಗೊಳಿಸಲು ಚಿಂತಿಸುತ್ತಿದ್ದು, ಕಳೆದ ಆಗಸ್ಟ್ 8ರಂದು ಈ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಂಡಿತ್ತು.

ಬಳಿಕ 16 ರಾಜ್ಯಗಳು ಇದಕ್ಕೆ ಅನುಮೋದಿಸಿದ್ದವು. ಇದು ಸಾಂವಿಧಾನಿಕ ತಿದ್ದುಪಡಿಯಾಗಿದ್ದರಿಂದ ಶೇ.50ರಷ್ಟು ರಾಜ್ಯಗಳ ಅನುಮೋದನೆಯ ಅಗತ್ಯ ಇತ್ತು.