ನವದೆಹಲಿ(ಆ.01): ತ್ರಿವಳಿ ತಲಾಖ್ ನಿಷೇಧಿಸುವ ಮುಸ್ಲಿಂ ಮಹಿಳೆಯರ ವಿವಾಹ ಹಕ್ಕು ರಕ್ಷಣಾ ಕಾಯ್ದೆ 2019ಕ್ಕೆ ರಾಷ್ಟ್ರಪತಿ ಆಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

ರಾಷ್ಟ್ರಪತಿ ಅಂಕಿತ ದೊರೆತ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಅನುಮೋದನೆಗೊಂಡಿರುವ ತ್ರಿವಳಿ ತಲಾಖ್ ಮಸೂದೆ ಶೀಘ್ರದಲ್ಲೇ ಕಾನೂನಾಗಿ ಜಾರಿಯಾಗಲಿದೆ.

ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ ತ್ರಿವಳಿ ತಲಾಖ್ ಕ್ರಿಮಿನಲ್ ಅಪರಾಧ ಎಂದು ಪರಿಗಣಿಸಲ್ಪಡಲಿದ್ದು ತ್ರಿವಳಿ ತಲಾಖ್ ಮೂಲಕ ವಿಚ್ಚೇದನ ನೀಡುವ ಪತಿಗೆ ಮೂರು ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ಸ್ಪಷ್ಟಪಡಿಸಿದೆ.