ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಅ.10 ಮತ್ತು 11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.10ರಂದು ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಮೈಸೂರು (ಅ. 10): ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಅ.10 ಮತ್ತು 11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.10ರಂದು ಜಯಚಾಮರಾಜ ಒಡೆಯರ್‌ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸುವರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

KSRTC ಅಧಿಕಾರಿ ನೌಕರರ ಭತ್ಯೆ ಹೆಚ್ಚಳ!

ಅ.11ರಂದು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡುವರು. ನಂತರ ವರುಣ ಗ್ರಾಮದಲ್ಲಿ ಜೆಎಸ್‌ಎಸ್‌ ಸಂಸ್ಥೆಯ ಹೊಸ ಕ್ಯಾಂಪಸ್‌ ಶಂಕು ಸ್ಥಾಪನೆಯಲ್ಲಿ ಪಾಲ್ಗೊಳ್ಳುವರು. ರಾಷ್ಟ್ರಪತಿ ರಾಮನಾಥ ಕೊವಿಂದ್‌ ಅವರು ಅ.11ರ ಬೆಳಗ್ಗೆ 8.30ಕ್ಕೆ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡುವುದರಿಂದ ಅಂದು ಬೆಳಗ್ಗೆ 8.30 ರಿಂದ 10.30 ರವರೆಗೆ ಸಾರ್ವಜನಿಕರಿಗೆ ದೇವಾಲಯಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಶ್ರೀಕಂಠೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.