ರಾಷ್ಟ್ರಪತಿ ಚುನಾವಣೆ ಸಮೀಪಿಸಿತ್ತಿರುವ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಿದ್ಧತೆಯಲ್ಲಿದ್ದಾರೆ. ಹಾಗಾಗಿ ದೆಹಲಿಗೆ ದೌಡಾಯಿಸಿದ್ದಾರೆ.
ನವದೆಹಲಿ (ಮೇ.16): ರಾಷ್ಟ್ರಪತಿ ಚುನಾವಣೆ ಸಮೀಪಿಸಿತ್ತಿರುವ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಿದ್ಧತೆಯಲ್ಲಿದ್ದಾರೆ. ಹಾಗಾಗಿ ದೆಹಲಿಗೆ ದೌಡಾಯಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಯಾರನ್ನು ಕಣಕ್ಕಿಳಿಸಬೇಕು ಎನ್ನುವ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಜೊತೆ ಸೋನಿಯಾ ಗಾಂಧಿ ಮಾತುಕತೆ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪ್ರದೇಶ್ ಕಮಿಟಿ ಅಧ್ಯಕ್ಷ ಅಧೀರ್ ಚೌಧರಿ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು. ಮಮತಾ ಬ್ಯಾನರ್ಜಿಯೊಂದಿಗೆ ಜಾಗೃತವಾಗಿ ವ್ಯವಹರಿಸಿ. ಟಿಎಂಸಿಯ ಕೆಲವು ಮುಖಂಡರು ಶಾರದಾ ಹಾಗೂ ನಾರದಾ ಹಗರಣದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ಎಲ್ಲಾ ಪಕ್ಷಗಳು ಸೇರಿ ಆಯ್ಕೆ ಮಾಡಿರುವ ಅಭ್ಯರ್ಥಿಯನ್ನು ಮಮತಾ ಬ್ಯಾನರ್ಜಿ ಸೂಚಿಸುವ ಸಾಧ್ಯತೆಯಿದೆ. ಪ್ರಣಬ್ ಮುಖರ್ಜಿಯವರ ಹೆಸರನ್ನೂ ಪ್ರಸ್ತಾಪಿಸುವ ಸಾಧ್ಯತೆಯಿದೆ.
ಮುಂದಿನ ವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
