2017ನೇ ಸಾಲಿನ ‘ಪ್ರೆಸ್‌ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು (ಡಿ.22): 2017ನೇ ಸಾಲಿನ ‘ಪ್ರೆಸ್ಕ್ಲಬ್ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರೆಸ್ಕ್ಲಬ್ ಪ್ರತಿವರ್ಷ ವರ್ಷದ ವ್ಯಕ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ನೀಡುತ್ತಾ ಬಂದಿದೆ. ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹನ್ನೊಂದು ಮಂದಿಗೆ ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಯನ್ನು ಘೋಷಿಸಿದೆ.
ಕ್ಲಬ್ ಅಧ್ಯಕ್ಷ ಕೆ. ಸದಾಶಿವಶೆಣೈ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಡಿ.31 ರಂದು ಬೆಳಗ್ಗೆ 10 ಗಂಟೆಗೆ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
