ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮೇರೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮನೋಹರ್ ಪರ್ರಿಕರ್ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.

ನವದೆಹಲಿ (ಮಾ.13): ಪ್ರಧಾನಿ ನರೇಂದ್ರ ಮೋದಿಯವರ ಸಲಹೆ ಮೇರೆಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮನೋಹರ್ ಪರ್ರಿಕರ್ ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ.

ಪ್ರಧಾನಿ ಸಲಹೆ ಮೇರೆಗೆ ಪ್ರಣಬ್ ಮುಖರ್ಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಹೆಚ್ಚುವರಿಯಾಗಿ ರಕ್ಷಣಾ ಖಾತೆಯ ಜವಾಬ್ದಾರಿಯನ್ನು ವಹಿಸಲು ಸೂಚಿಸಿದ್ದಾರೆ.

ಮನೋಹರ್ ಪರ್ರಿಕರ್ ನಾಳೆ ಗೋವಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 21 ಶಾಸಕರು ಬೆಂಬಲ ವ್ಯಕ್ತಪಡಿಸಿದ ನಂತರ ಗೋವಾ ರಾಜ್ಯಪಾಲೆ ಮೃದುಲಾ ಸಿಂಹ ಸರ್ಕಾರ ರಚಿಸುವ ಬಗ್ಗೆ ಮಾತುಕತೆ ನಡೆಸಲು ಪರ್ರಿಕರ್ ರನ್ನು ಆಹ್ವಾನಿಸಿದ್ದಾರೆ.