ಡಿಎಂಕೆ ಮುಖ್ಯಸ್ಥ ಕರುಣಾನಿಧಿ ನಿಧನ ಹಿನ್ನೆಲೆ! ಅಂತಿಮ ದರ್ಶನ ಪಡೆದ ಪ್ರಧಾನಿ ಮೋದಿ! ಚೆನ್ನೈನ ರಾಜಾಜಿ ಹಾಲ್ ನಲ್ಲಿ ಅಂತಿಮ ದರ್ಶನ  

ಚೆನ್ನೈ(ಆ.8): ಪ್ರಧಾನಮಂತ್ರಿ ನರೇಂದ್ರ ಮೋದಿ ನಿನ್ನೆ ನಿಧನರಾಧ ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಪ್ರಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು.

Scroll to load tweet…

ಕರುಣಾನಿಧಿ ಪ್ರಾರ್ಥೀವ ಶರೀರವನ್ನು ಚೆನ್ನೈನ ರಾಜಾಜಿ ಹಾಲ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ವಿಮಾನ ನಿಲ್ದಾಣದಿಂದ ನೇರವಾಗಿ ರಾಜಾಜಿ ಹಾಲ್ ಗೆ ಬಂದ ಪ್ರಧಾನಿ, ಕರುಣಾನಿಧಿ ಅಂತಿಮ ದರ್ಶನ ಪಡೆದರು.

Scroll to load tweet…

ಈ ವೇಳೆ ಕರುಣಾನಿಧಿ ಪುತ್ರ ಎಂ.ಕೆ. ಸ್ಟಾಲಿನ್, ಪುತ್ರಿ ಕನಿಮೋಳಿ ಅವರನ್ನು ಸಂತೈಸಿದ ಮೋದಿ, ಕುಟುಂಬದ ದು:ಖದಲ್ಲಿ ತಾವೂ ಭಾಗಿಯಾಗಿರುವುದಾಗಿ ತಿಳಿಸಿದರು. ಪ್ರಧಾನಿ ಮೋದಿ ಜೊತೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಜೊತೆಗಿದ್ದರು.