ಮಂಡ್ಯದ ಮದ್ದೂರಿನಲ್ಲಿ ಎಸ್ಆರ್'ಎಸ್ ಬಸ್  ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಬಸ್'ನಲ್ಲಿದ್ದ 15 ಮಂದಿಯು ಅವಘಡದಿಂದ ಪಾರಾಗಿದ್ದಾರೆ.

ಮಂಡ್ಯ(ನ.30): ಮಂಡ್ಯದ ಮದ್ದೂರಿನಲ್ಲಿ ಎಸ್ಆರ್'ಎಸ್ ಬಸ್ ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಬಸ್'ನಲ್ಲಿದ್ದ 15 ಮಂದಿಯು ಅವಘಡದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಂಡ್ಯದ ಮದ್ದೂರು ಸಮೀಪದ ಕೊಲ್ಲಿಯಲ್ಲಿ ಈ ಅವಘಡ ಸಂಭವಿಸಿದೆ.

ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.