ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹದಿಂದ ವಾಣಿಜ್ಯೇತರ ವಾಹನಗಳಿಗೆ ವಿನಾಯ್ತಿ ನೀಡುವ ವಿಚಾರ ಕುರಿತಂತೆ ರಚಿಸಲಾಗಿರುವ ಕರಡು ಮಸೂದೆ ಸಂಸತ್ತಿನ ಮುಂದೆ ಚರ್ಚೆ ನಡೆದು ಅಂಗೀಕಾರವಾದಲ್ಲಿ ಖಾಸಗಿ ವಾಹನಗಳು ಟೋಲ್ ನಿಂದ ವಿನಾಯ್ತಿ ಪಡೆದುಕೊಳ್ಳಲಿವೆ. 

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಸಂಗ್ರಹದಿಂದ ವಾಣಿಜ್ಯೇತರ ವಾಹನಗಳಿಗೆ ವಿನಾಯ್ತಿ ನೀಡುವ ವಿಚಾರ ಕುರಿತಂತೆ ರಚಿಸಲಾಗಿರುವ ಕರಡು ಮಸೂದೆ ಸಂಸತ್ತಿನ ಮುಂದೆ ಚರ್ಚೆಗೆ ಬಾಕಿಯಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಾಜ್ಯ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಣಿಜ್ಯೇತರ ವಾಹನಗಳಿಗೆ ಟೋಲ್‌ ಶುಲ್ಕ ಪಾವತಿಸುವುದರಿಂದ ವಿನಾಯ್ತಿ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಮತ್ತು ಕರ್ನಾಟಕ ರಾಜ್ಯ ವಕೀಲರ ಸಂಘಗಳ ಒಕ್ಕೂಟದ ಅಧ್ಯಕ್ಷ ಎ.ಪಿ.ರಂಗನಾಥ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಸುಜಾತ ಅವರಿದ್ದ ವಿಭಾಗೀಯ ವಿಭಾಗೀಯ ನ್ಯಾಯಪೀಠಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಕೀಲ ಯು.ಆರ್‌.ನಾಯಕ್‌ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ಕುರಿತಂತೆ ವಿವರಗಳನ್ನು ಸಲ್ಲಿಸುವಂತೆ ನಾಯಕ್‌ ಅವರಿಗೆ ಸೂಚಿಸಿ ವಿಚಾರಣೆಯನ್ನು ಡಿಸೆಂಬರ್‌ 19ಕ್ಕೆ ಮುಂದೂಡಿತು.