ಸತತ ಸೋಲುಗಳಿಂದ ಹೈರಾಣಾಗಿರುವ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷೆಯನ್ನಾಗಿ ನೇಮಕ ಮಾಡುವ ಸುಳಿವನ್ನು ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಬಿಟ್ಟುಕೊಟ್ಟಿದ್ದಾರೆ ಎಂಬ ಸುದ್ದಿಯೊಂದು ಸಂಚಲನಕ್ಕೆ ಕಾರಣವಾಗಿದೆ.
ನವದೆಹಲಿ(ಆ.15): ಸತತ ಸೋಲುಗಳಿಂದ ಹೈರಾಣಾಗಿರುವ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ತಮ್ಮ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷೆಯನ್ನಾಗಿ ನೇಮಕ ಮಾಡುವ ಸುಳಿವನ್ನು ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಬಿಟ್ಟುಕೊಟ್ಟಿದ್ದಾರೆ ಎಂಬ ಸುದ್ದಿಯೊಂದು ಸಂಚಲನಕ್ಕೆ ಕಾರಣವಾಗಿದೆ.
ಆ.8ರಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ಅಂತ್ಯದಲ್ಲಿ ಹಿರಿಯ ನಾಯಕರ ಮುಂದೆ ಇಂತಹ ಸುಳಿವೊಂದನ್ನು ಸೋನಿಯಾ ನೀಡಿದ್ದಾರೆ ಎಂದು ಆಂಗ್ಲ ದೈನಿಕವೊಂದು ವರದಿ ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಚೇತರಿಕೆಯ ಟಾನಿಕ್ ನೀಡಲು ಪ್ರಿಯಾಂಕಾ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರಬೇಕು ಎಂಬ ಕೂಗು ಆಗಾಗ್ಗೆ ಕೇಳಿ ಬರುತ್ತಲೇ ಇದೆ. ಇಂತಹ ಸಂದರ್ಭದಲ್ಲೇ ಈ ಸುದ್ದಿ ‘ಾರಿ ಸಂಚಲನಕ್ಕೆ ಕಾರಣವಾಗಿದೆ.
ಆದರೆ ಇದೊಂದು ಸುಳ್ಳು ಸುದ್ದಿಯ ಕುಚೋದ್ಯ ಪ್ರಕರಣ. ಅನಗತ್ಯ ಊಹಾಪೋಹ. ಸಂಪೂರ್ಣ ಸುಳ್ಳು ಹಾಗೂ ಆಧಾರರಹಿತ ಎಂದು ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಹೇಳಿಕೆ ನೀಡಿದ್ದಾರೆ.
