ಕಾಂಗ್ರೆಸ್‌ ನಾಯಕಿ ಪುತ್ರಿಗೆ ರೇಪ್‌ ಬೆದರಿಕೆ

Priyanka Chaturvedi files complaint after rape threat to daughter
Highlights

ಕಾಂಗ್ರೆಸ್‌ ಮುಖಂಡೆಯ ಪುತ್ರಿ ಮೇಲೆ ಅತ್ಯಾಚಾರ ಎಸಗುವುದಾಗಿ ಸಾಮಾಜಿಕ ತಾಣದಲ್ಲಿ ಬೆದರಿಕೆ ಹಾಕಿದ್ದು, ಈ ಸಂಬಂಧ ಇದೀಗ ಆ ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ.

ನವದೆಹಲಿ: ಕಾಂಗ್ರೆಸ್‌ ವಕ್ತಾರೆ ಪ್ರಿಯಾಂಕಾ ಚತುರ್ವೇದಿ ಅವರ ಪುತ್ರಿ ಮೇಲೆ ಅತ್ಯಾಚಾರ ಎಸಗುವುದಾಗಿ ಸಾಮಾಜಿಕ ತಾಣದಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ. 

ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುವ ಬೆದರಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ದೆಹಲಿ ಪೊಲೀಸ್‌ ಆಯುಕ್ತ ಅಮೂಲ್ಯ ಪಟ್ನಾಯಕ್‌ ಮತ್ತು ಮುಂಬೈ ಪೊಲೀಸರಿಗೆ ಸೂಚಿಸಿದ್ದರು. 

ಅಲ್ಲದೆ, ಕಾಂಗ್ರೆಸ್‌ ವಕ್ತಾರೆಯ ಪುತ್ರಿಗೆ ಅತ್ಯಾಚಾರದ ಬೆದರಿಕೆ ಹಾಕಿದ ಖಾತೆಗಳ ವಿವರ ನೀಡುವಂತೆಯೂ ಟ್ವಿಟರ್‌ಗೆ ಕೋರಲಾಗಿದೆ. ಗಿರೀಶ್‌1605 ಎಂಬ ಟ್ವೀಟರ್‌ ಖಾತೆಯಿಂದ ಪ್ರಿಯಾಂಕಾ ಅವರ ಪುತ್ರಿಗೆ ಬೆದರಿಕೆಯೊಡ್ಡಲಾಗಿತ್ತು. ಇದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಟೀಕೆಗೆ ಗುರಿಯಾಗುತ್ತಲೇ ಈ ಟ್ವೀಟ್‌ ಅನ್ನು ಅಳಿಸಿ ಹಾಕಲಾಗಿತ್ತು.

loader