ನವದೆಹಲಿ(ಜ.23): ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಡಿಯಚ್ಚು, ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆಗೂ ಸಕ್ರೀಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಪಕ್ಷದ ಉಳಿವಿಗಾಗಿ ಹೊಸ ದಾಳ ಉರುಳಿಸಿರುವ ಕಾಂಗ್ರೆಸ್ ವರಿಷ್ಠರು, ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.

ಪ್ರಿಯಾಂಕಾಗೆ ಇದೇ ಮೊದಲ ಬಾರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆಯೊಂದು ದೊರೆತಂತಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಏನು ಮ್ಯಾಜಿಕ್ ಮಾಡಲಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರಿಸಬೇಕಿದೆ. 

ಪೂರ್ವ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಹೊಣೆ ಹೊತ್ತ ಪ್ರಿಯಾಂಕಾ, ಪ್ರಧಾನಿ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿ ಸಹ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಇದೇ ವೇಳೆ ಕೆಸಿ ವೇಣುಗೋಪಾಲ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇನ್ನು ಜೋತಿರಾದಿತ್ಯ ಸಿಂಧಿಯಾ ಅವರನ್ನು ಉತ್ತರ ಪ್ರದೇಶ ಪಶ್ಚಿಮ ವಿಭಾಗದ ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಯನ್ನಾಗಿ ಹಾಗೂ ಗುಲಾಂ ನಬಿ ಆಜಾದ್ ಅವರನ್ನು ಹರಿಯಾಣದ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.