ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು (ಫೆ.07): ಎರಡು ದಿನಗಳವರೆಗೆ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಕರಾವಳಿ ಪ್ರದೇಶದವರೆಗೆ ವಾಯುಭಾರ ಕುಸಿತ ಕಂಡು ಬಂದಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ದಕ್ಷಿಣ, ಉತ್ತರ ಒಳನಾಡು, ಕರವಾಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಎಂ.ಮೇತ್ರಿ ಹೇಳಿದ್ದಾರೆ.

Last Updated 11, Apr 2018, 12:39 PM IST