ನಿಷೇಧದ ನಂತ್ರ ರಾತ್ರಿಹೊತ್ತಲ್ಲಿ ಪ್ಲಾಸ್ಟಿಕ್ ತಯಾರಿ, BBMPಗೆ ತಲೆನೋವು
ಪ್ಲಾಸ್ಟಿಕ್ ನಿಷೇಧ ಮಾಡಿದ ಮೇಲೂ ಬಿಬಿಎಂಪಿಗೆ ತಲೆನೋವು ಮಾತ್ರ ಕಡಿಮೆ ಆಗಿಲ್ಲ. ಪ್ಲಾಸ್ಟಿಕ್ ನಿಷೇಧಿಸಿದ ನಂತರ ಹಲವು ಕಡೆ ರಾತ್ರಿ ಹೊತ್ತಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ತಾಯರಿಸುತ್ತಿರುವುದು ಬಿಬಿಎಂಪಿ ಗಮನಕ್ಕೆ ಬಂದಿದೆ. ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಯಂತ್ರಿಸುವ ದೃಷ್ಟಿಯಿಂದ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಬಿಬಿಎಂಪಿಗೆ ಸಹಕರಿಸುವಂತೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.
ಬೆಂಗಳೂರು(ಸೆ. 25): ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ ಮತ್ತು ಬಳಕೆಯನ್ನು ನಗರದಲ್ಲಿ ಸಂಪೂರ್ಣ ನಿಯಂತ್ರಿಸುವ ದೃಷ್ಟಿಯಿಂದ ಮಾಲಿನ್ಯ ನಿಯಂತ್ರಣ ಮಂಡಳಿ, ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಬಿಬಿಎಂಪಿ ಗೆ ಸಹಕರಿಸುವಂತೆ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಮನವಿ ಮಾಡಿದ್ದಾರೆ.
ಪ್ಲಾಸ್ಟಿಕ್ ನಿಷೇಧ ಕುರಿತಂತೆ ಮೇಯರ್ ಗಂಗಾಂಬಿಕೆ ಅಧ್ಯಕ್ಷತೆಯಲ್ಲಿ ಮಂಗಳವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ನಗರದಲ್ಲಿ ಈಗಾಗಲೇ ಬಹುತೇಕ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕಾ ಘಟಕಗಳನ್ನು ಮುಚ್ಚಲಾಗಿದೆಯಾದರೂ ಕೆಲವೆಡೆ ರಾತ್ರಿ ವೇಳೆ ತಯಾರಿಸಲಾಗುತ್ತಿದೆ.
ರಸ್ತೆ ಹೊಂಡಗಳನ್ನು ಮುಚ್ಚೋಕೆ ಅಡ್ಡಿಯಾಗ್ತಿದೆ ವಾಹನ ದಟ್ಟಣೆ
ಜತೆಗೆ, ನಗರದ ಹೊರಭಾಗದಿಂದ ಪ್ಲಾಸ್ಟಿಕ್ ಉತ್ಪನ್ನಗಳನ್ನು ಅಕ್ರಮವಾಗಿ ತಂದು ನಗರದಲ್ಲಿ ಮಾರಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಹಾಗಾಗಿ ಪ್ಲಾಸ್ಟಿಕ್ ಬಳಕೆ ತಡೆಯಲು ಬಿಬಿಎಂಪಿ ಜತೆಗೆ ಪೊಲೀಸ್, ಸಾರಿಗೆ ಇಲಾಖೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಎನ್‌ಜಿಟಿ ರಾಜ್ಯ ಮಟ್ಟದ ಘನತ್ಯಾಜ್ಯ ನಿರ್ವಹಣೆ ಉಸ್ತುವಾರಿ ಸಮಿತಿ ಅಧ್ಯಕ್ಷ ಸುಭಾಷ್ ಬಿ.ಅಡಿ ಮಾತನಾಡಿ, ಪ್ಲಾಸ್ಟಿಕ್ ಕೈಚೀಲಗಳ ಬಳಕೆಯನ್ನು ಮೊದಲು ತಡೆಯಬೇಕು. ಅದರ ಜತೆಗೆ ಒಮ್ಮೆ ಮಾತ್ರ ಬಳಸುವ ಪ್ಲಾಸ್ಟಿಕ್ ಬಗ್ಗೆಯೂ ಗಮನಹರಿಸಬೇಕು. ಪ್ಲಾಸ್ಟಿಕ್ ಬಳಕೆಯಿಂದ ಜನರು ಹಿಂದೆ ಸರಿಯಲು ಅದರಿಂದಾಗುವ ದುಷ್ಪರಿಣಾಮ, ನಿಯಮದಲ್ಲಿನ ಅಂಶಗಳು, ಶಿಕ್ಷೆಯ ಕುರಿತು ಅರಿವು ಮೂಡಿಸಬೇಕು. ಬೀದಿ ಬದಿ ವ್ಯಾಪಾರಿಗಳು ಹೆಚ್ಚಾಗಿ ಪ್ಲಾಸ್ಟಿಕ್ ಚೀಲ ಬಳಸುತ್ತಿದ್ದು, ಅವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.
ಇಂದಿರಾ ಕ್ಯಾಂಟೀನ್ ಭವಿಷ್ಯ ಬಿಎಸ್‌ವೈ ಕೈಯಲ್ಲಿ..!
ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್ ಮಾತನಾಡಿ, ದೊಡ್ಡ ಮಳಿಗೆಗಳಲ್ಲೂ ಪ್ಲಾಸ್ಟಿ ಕ್ ಬಳಕೆ ಸಂಪೂರ್ಣವಾಗಿ ನಿಂತಿಲ್ಲ. ಅಂತಹ ಶಾಪಿಂಗ್ ಮಾಲ್‌ಗಳ ಮೇಲೆ ದಾಳಿ ನಡೆಸಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಮಾಲಿನ್ಯ ನಿಯಂತ್ರಣ ಮಂಡಳಿ ಪ್ಲಾಸ್ಟಿಕ್ ತಯಾರಿಕೆ ಘಟಕಗಳಿಗೆ ಅನುಮತಿ ನೀಡಿದೆ ಎಂದರು.