ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಹೊರಭಾಗದಲ್ಲಿ ನಿನ್ನೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಇಂದು ದೆಹಲಿ ಪೊಲೀಸರು ಸೆ,144 ಅನ್ನು ಜಾರಿಗೊಳಿಸಿದ್ದಾರೆ. ನಿಷೇಧಾಜ್ಞೆಯು ಡಿ.28ವರೆಗೆ ಮುಂದುವರೆಯಲಿರುವುದು ಎನ್ನಲಾಗಿದೆ.

ನವದೆಹಲಿ (ನ.02): ಸಮಾನ ಹುದ್ದೆ-ಸಮಾನ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರದಿಂದ ಆಗುತ್ತಿರುವ ವಿಳಂಬದಿಂದ ಬೇಸತ್ತು ಮಾಜಿ ಯೋಧ ಆತ್ಮಹತ್ಯೆ ಮಾಡಿರುವ ಘಟನೆ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಕನ್ನಾಟ್’ಪ್ಲೇಸ್’ನಲ್ಲಿ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಯೋಧ ರಾಮ್ ಕಿಶನ್ ಗ್ರೆವಾಲ್ ಮೃತದೇಹವಿಡಲಾಗಿದ್ದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಹೊರಭಾಗದಲ್ಲಿ ನಿನ್ನೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದ ಹಿನ್ನೆಲೆಯಲ್ಲಿ ಇಂದು ದೆಹಲಿ ಪೊಲೀಸರು ಸೆ,144 ಅನ್ನು ಜಾರಿಗೊಳಿಸಿದ್ದಾರೆ. ನಿಷೇಧಾಜ್ಞೆಯು ಡಿ.28ವರೆಗೆ ಮುಂದುವರೆಯಲಿರುವುದು ಎನ್ನಲಾಗಿದೆ.

ಗ್ರೆವಾಲ್ ಕುಟುಂಬಸ್ಥರು, ಆತ್ಮಹತ್ಯೆಗೆ ಕೇಂದ್ರ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದಾರೆ ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಗ್ರೆವಾಲ್, ಸಮಾನ ಪಿಂಚಣಿ ವಿಚಾರದಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್’ಗೆ ಪತ್ರ ಬರೆದಿದ್ದರು.

ಮೃತ ಕುಟುಂಬದ ಸದಸ್ಯರನ್ನು ಭೇಟಿಯಾಗಲು ತೆರಳಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ-ಮುಖ್ಯಮಂತ್ರಿ ಮನೀಶ್ ಸಿಸೋದಿಯಾ ಅವರನ್ನು ದೆಹಲಿ ಪೊಲೀಸರು ಗೇಟ್’ನಲ್ಲೇ ತಡೆದು ವಶಕ್ಕೆ ಪಡೆದಿದ್ದರು.