ಬೆಂಗಳೂರು (ಸೆ.27): ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಭದ್ರತೆಗಾಗಿ 16 ಸಾವಿರ ಪೊಲೀಸರು ನಿಯೋಜಿಸಲಾಗಿದೆ, ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್ ಆರ್ ಪಿ, ಆರ್ ಎಎಫ್, ಮತ್ತು ಗಲಭೆ ನಡೆದ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣ, ವಿಜಯನಗರ, ಲಗ್ಗೆರೆ, ಹೆಗ್ಗನಹಳ್ಳಿ, ರಾಜಗೋಪಾಲನಗರ ಭಾಗದಲ್ಲಿ ಭಾರೀ ಬಂದೋಬಸ್ತ್ ಮಾಡಲಾಗಿದೆ.

ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಸೆ.30 ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಮುಂದುವರೆಸಲಾಗಿದೆ.

ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ.