ತುಂಗಭದ್ರಾದಿಂದ ಜಗಳೂರಿಗೆ ನೀರು: ವರದಿ ಕೇಳಿದ ಬಿಎಸ್‌ವೈ
ದಾವಣಗೆರೆ ಜಿಲ್ಲೆಯ ಜಗಳೂರಿಗೆ ಪೈಪ್‌ಲೈನ್ ಮೂಲಕ ತುಂಗಭದ್ರಾ ಕುಡಿಯುವ ನೀರನ್ನು ಹರಿಸಲು ಸಾಧ್ಯವೇ ಎಂಬುದರ ಕುರಿತು ಶೀಘ್ರವೇ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಆದಷ್ಟುಬೇಗ ಆ ಕೆಲಸವನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು(ಸೆ.14): ದಾವಣಗೆರೆ ಜಿಲ್ಲೆಯ ಜಗಳೂರಿಗೆ ಪೈಪ್‌ಲೈನ್ ಮೂಲಕ ತುಂಗಭದ್ರಾ ಕುಡಿಯುವ ನೀರನ್ನು ಹರಿಸಲು ಸಾಧ್ಯವೇ ಎಂಬುದರ ಕುರಿತು ಶೀಘ್ರವೇ ವರದಿ ನೀಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಗೃಹ ಕಚೇರಿ ‘ಕೃಷ್ಣಾ’ಗೆ ಭೇಟಿ ನೀಡಿದ್ದ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ನೇತೃತ್ವದ ನಿಯೋಗ ಸುಮಾರು 2,500 ಕೋಟಿ ರು. ವೆಚ್ಚದಲ್ಲಿ ಪಾವಗಡಕ್ಕೆ ತುಂಗಭದ್ರಾ ಜಲಾಶಯದಿಂದ ಹರಿಸುವ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದೆ. ಈ ಪೈಪ್‌ಲೈನ್ ಜಗಳೂರು ಮೂಲಕ ಹಾದು ಹೋಗುತ್ತಿದ್ದು, ಈ ಯೋಜನೆಯಲ್ಲಿಯೇ ಜಗಳೂರಿಗೆ ನೀರು ಕೊಡಬೇಕು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿತು.
ವರದಿ ನೀಡಲು ಸೂಚನೆ::
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಈಗಾಗಲೇ ಈ ಯೋಜನೆ ಕಾಮಗಾರಿ ಟೆಂಡರ್ ಮುಗಿದಿದ್ದು, ಹೊಸ ಟೆಂಡರ್ ಕರೆಯಲು ಆಗುವುದಿಲ್ಲ. ಹೀಗಾಗಿ ಹೊಸದಾಗಿ ಯಾವ ರೀತಿ ಅದೇ ಪೈಪ್‌ಲೈನ್ ಮೂಲಕ ನೀರು ತರಲು ಸಾಧ್ಯ ಅನ್ನುವುದರ ಬಗ್ಗೆ ವರದಿ ಕೊಡಿ. ಆದಷ್ಟುಬೇಗ ಆ ಕೆಲಸವನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನೆನೆಗುದಿಗೆ
ಭದ್ರಾ ಮೇಲ್ದಂಡೆ ಮೂಲಕ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ನೆನೆಗುದಿಗೆ ಬಿದ್ದಿದೆ. ಹೀಗಾಗಿ ಅದನ್ನು ಮತ್ತೆ ಜಾರಿ ಮಾಡಬೇಕು. ಅಷ್ಟೇ ಅಲ್ಲದೆ 109 ಹಳ್ಳಿಗಳ ಕುಡಿಯುವ ನೀರಿನ ಯೋಜನೆ ಕೂಡ ನೆನೆಗುದಿಗೆ ಬಿದ್ದಿದ್ದು, ಅದಕ್ಕೂ ಸಹ ಚಾಲನೆ ಮಾಡಬೇಕು. ಜಗಳೂರು ಮತ್ತು ಹರಿಹರದ ಕೆಲವು ಭಾಗದಲ್ಲಿ ಬರಗಾಲ ಆವರಿಸಿದ್ದು, ಕೂಡಲೇ ಮೇವು ಬ್ಯಾಂಕ್ ತೆರೆಯುವಂತೆ ರೈತರು ಮತ್ತು ಭದ್ರಾ ಮೇಲ್ದಂಡೆ ಯೋಜನೆ ಸಮಿತಿ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಲೋಕಸಭಾ ಚುನಾವಣೆ : ಕಾಂಗ್ರೆಸ್ ಸೋಲಿಗೆ ಕಾರಣ ಬಹಿರಂಗ!
ಭದ್ರಾ ಮೇಲ್ದಂಡೆ ಯೋಜನೆ ಮೂಲಕ ಹರಿಹರದಿಂದ ಹಳ್ಳಿಗಳಿಗೆ ನೀರು ಹಾಯಿಸುವುದಕ್ಕೆ ಸಾಧ್ಯವೇ ಅನ್ನುವುದರ ಕುರಿತು ಯೋಜನೆ ರೂಪಿಸಬೇಕು ಮತ್ತು ಕೂಡಲೇ ಗೋ ಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯುವ ಮೂಲಕ ರಾಸುಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ